ವಾಲ್ಮೀಕ್ ಕರಾಡ್ ಅವರು ಸಿಐಡಿ ಮುಂದೆ ಶರಣಾದರು
– ಪಿಟಿಐ ಚಿತ್ರ
ಮುಂಬೈ: ಸರಪಂಚ್ ಸಂತೋಷ್ ದೇಶ್‌ಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ₹2 ಕೋಟಿ ಸುಲಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಾಲ್ಮೀಕ್ ಕರಾಡ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ವೇಳೆ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ಅವರ ಬೆಂಬಲಿಗರು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಾಲ್ಮೀಕ್ ಕರಾಡ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಮತ್ತೊಂದು ಗುಂಪಿನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಅಧಿಕಾರಿಗಳು ಹೇಳಿದ್ದಾರೆ.
ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ ಅವರ ಆಪ್ತರಾಗಿರುವ ವಾಲ್ಮೀಕ್ ಕರಾಡ್ ಈಚೆಗೆ ಪೊಲೀಸರಿಗೆ ಶರಣಾಗಿದ್ದರು. ಪೊಲೀಸರು ಕರಾಡ್ ಅವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ನ್ಯಾಯಾಲಯದ ಕಲಾಪ ನಡೆಯುತ್ತಿರುವಾಗಲೇ 30ಕ್ಕೂ ಹೆಚ್ಚು ಬೆಂಬಲಿಗರ ಗುಂಪು ವಾಲ್ಮೀಕ್ ಕರಾಡ್ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ಜಿಲ್ಲಾಧಿಕಾರಿಗಳ ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕಾಗಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ ಇದೇ ಪ್ರಕರಣದಲ್ಲಿ ಕರಾಡ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ 15 ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.