ADVERTISEMENT

ಹಿಮಾಚಲಕ್ಕೆ ಭೇಟಿ ನೀಡುವ ಪ್ರವಾಸಿಗರು ಮಾರ್ಗಸೂಚಿ ಪಾಲಿಸಬೇಕೆಂದು ಬಯಸುವೆ: ಠಾಕೂರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜುಲೈ 2021, 9:05 IST
Last Updated 17 ಜುಲೈ 2021, 9:05 IST
ಚಿತ್ರ: ಎಎನ್‌ಐ ಟ್ವೀಟ್
ಚಿತ್ರ: ಎಎನ್‌ಐ ಟ್ವೀಟ್   

ಶಿಮ್ಲಾ:ಪ್ರವಾಸಿಗರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುವುದನ್ನುರಾಜ್ಯ ಸರ್ಕಾರವುಬಯಸುತ್ತದೆ. ಆದರೆ, ಅವರು ಕೋವಿಡ್‌-19 ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಅವರು ಹೇಳಿದ್ದಾರೆ.

ʼಪ್ರೇಕ್ಷಣೀಯ ಪ್ರದೇಶಗಳಾದ ಶಿಮ್ಲಾ, ಮನಾಲಿ, ಧರ್ಮಶಾಲಾಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗಿದೆ. ಹೀಗಾಗಿ ನಾವು ಜನದಟ್ಟಣೆ ನಿಯಂತ್ರಣ ಮತ್ತು ನಿರ್ವಹಣೆ ಸಲುವಾಗಿ ಪೊಲೀಸರನ್ನು ನಿಯೋಜಿಸುವಂತೆ ಜಿಲ್ಲಾಡಳಿತಗಳಿಗೆ ಆದೇಶಿಸಿದ್ದೇವೆʼ ಎಂದು ಠಾಕೂರ್‌ ಹೇಳಿದ್ದಾರೆ.

ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳಲ್ಲಿ ಕೋವಿಡ್‌ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗುತ್ತಿದೆ. ಹೋಟೆಲ್‌ಗಳ ಕಾರ್ಯನಿರ್ವಹಣೆಗೆ ಸ್ಟ್ಯಾಂಡರ್ಡ್‌ ಆಪರೇಟಿಂಗ್‌ ಪ್ರೊಸಿಜರ್‌ (ಎಸ್‌ಒಪಿ)ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ.ಪ್ರವಾಸಿಗರು ರಾಜ್ಯಕ್ಕೆ ಭೇಟಿ ನೀಡುವುದನ್ನು ಬಯಸುತ್ತೇವೆ. ಆದರೆ, ಅವರೆಲ್ಲ ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕುʼ ಎಂದು ಹೇಳಿದ್ದಾರೆ.

ADVERTISEMENT

ಪ್ರವಾಸಿತಾಣಗಳು ಕೋವಿಡ್‌ ಪ್ರಕರಣಗಳ ಏರಿಕೆಗೆ ಕಾರಣವಾಗಬಹುದು ಎಂದುಕೇಂದ್ರ ಸರ್ಕಾರವು ಕಳವಳ ವ್ಯಕ್ತಪಡಿಸಿತ್ತು. ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್‌ ಅವರು, ಜನರು ಮಾರ್ಗಸೂಚಿಯನ್ನು ಪಾಲಿಸದೆ ಪ್ರವಾಸಿ ತಾಣಗಳಲ್ಲಿ ಕಾಣಿಸಿಕೊಳ್ಳುತ್ತಿರುವ ದೃಶ್ಯಗಳು ಕಳವಳಕ್ಕೆ ಕಾರಣವಾಗಿವೆ ಎಂದು ಈ ತಿಂಗಳ ಆರಂಭದಲ್ಲಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.