ADVERTISEMENT

Waqf Bill | ನ್ಯಾಯ, ಪಾರದರ್ಶಕತೆಯತ್ತ ಐತಿಹಾಸಿಕ ಹೆಜ್ಜೆ: ಆಂಧ್ರ DCM ಪವನ್‌

ಪಿಟಿಐ
Published 4 ಏಪ್ರಿಲ್ 2025, 10:55 IST
Last Updated 4 ಏಪ್ರಿಲ್ 2025, 10:55 IST
<div class="paragraphs"><p>ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್‌ ಕಲ್ಯಾಣ್‌</p></div>

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್‌ ಕಲ್ಯಾಣ್‌

   

ಅಮರಾವತಿ: ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025 ಅಂಗೀಕಾರವು ದೇಶದಲ್ಲಿ ಸಮಾಂತರ ನ್ಯಾಯ, ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಒದಗಿಸಲುವ ನಿಟ್ಟಿನಲ್ಲಿ ಮತ್ತೊಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಶುಕ್ರವಾರ ತಿಳಿಸಿದ್ದಾರೆ.

ಈ ತಿದ್ದುಪಡಿಯಿಂದಾಗಿ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ಧೀರ್ಘ ಕಾಲದ ಗೊಂದಲಗಳಿಗೆ ಪರಿಹಾರಿಸುವ ಬದ್ಧತೆಯನ್ನು ಕೇಂದ್ರ ಸರ್ಕಾರ ತೋರಿದೆ ಎಂದು ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಅವರು ತಿಳಿಸಿದ್ದಾರೆ.

ADVERTISEMENT

ಹಲವು ವರ್ಷಗಳಿಂದ ವಕ್ಫ್ ಮಂಡಳಿಗಳ ಕಾರ್ಯಾಚರಣೆಯ ಬಗ್ಗೆ ಗಂಭೀರ ಕಳವಳಗಳಿದ್ದವು. ಪಾರದರ್ಶಕತೆಯ ಕೊರತೆ, ಆಸ್ತಿ ದುರುಪಯೋಗ ಆಗುವ ಸಾಧ್ಯತೆಗಳು ಹೆಚ್ಚಿನದಾಗಿತ್ತು. ಸಬ್ಸಿಡಿಗಳು ಸೇರಿದಂತೆ ಇನ್ನಿತರೆ ಅನುಕೂಲಗಳು ಉದ್ದೇಶಿತ ಫಲಾನುಭವಿಗಳನ್ನು ತಲುಪುತ್ತಿರಲಿಲ್ಲ ಎಂದು ಪವನ್‌ ಆರೋಪಿಸಿದ್ದಾರೆ.

ವಕ್ಫ್ ಮಂಡಳಿಗೆ ಎದುರಾಗುವ ಸವಾಲುಗಳನ್ನು ಪರಿಹರಿಸುವ, ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ವಕ್ಫ್ ಪ್ರಯೋಜನಗಳನ್ನು ಬಡ ಮುಸ್ಲಿಮರಿಗೆ ತಲುಪಿಸಲು ಈ ಯೋಜನೆ ಸಹಕಾರಿಯಾಗಲಿದೆ. ಮಂಡಳಿಯಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರಾತಿನಿಧ್ಯವನ್ನು ಒದಗಿಸುವ ನಿಟ್ಟಿನಲ್ಲಿಯೂ ಈ ತಿದ್ದುಪಡಿ ಮಹತ್ವದ ಹೆಜ್ಜೆಯಾಗಿದೆ ಎಂದು ಪವನ್‌ ಕಲ್ಯಾಣ್‌ ಹೇಳಿದ್ದಾರೆ.

ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಲಾಗಿದೆ. ಇದು ದೇಶದ ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷಗಳು 'ಮುಸ್ಲಿಂ ವಿರೋಧಿ', 'ಅಸಂವಿಧಾನಿಕ ನಡೆ' ಎಂದು ಭಾರಿ ವಿರೋಧ ವ್ಯಕ್ತಪಡಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.