ಭೋಪಾಲ್(ಮಧ್ಯಪ್ರದೇಶ): ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಭೋಪಾಲ್‌ನ ಈದ್ಗಾ ಮಸೀದಿಯಲ್ಲಿ ಈದ್–ಉಲ್–ಫಿತ್ರ್ ವಿಶೇಷ ಪ್ರಾರ್ಥನೆ ಸಂದರ್ಭ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಿದರು.
ಮಸೂದೆ ವಿರೋಧಿಸಿ ಕೈಗೆ ಕಪ್ಪುಪಟ್ಟಿ ಧರಿಸಿ ಪ್ರಾರ್ಥನೆ ಮಾಡುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ ಮಾಡಿತ್ತು.
ಈ ಕುರಿತ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ಹಂಚಿಕೊಂಡಿದೆ.
ಕಳೆದ ವರ್ಷದ ಆಗಸ್ಟ್‌ನಲ್ಲಿ ಲೋಕಸಭೆಯಲ್ಲಿ ಮಂಡಿಸಿದ ‘ವಕ್ಫ್ ತಿದ್ದುಪಡಿ ಮಸೂದೆ–2024’ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಆಧುನಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲಿದೆ ಎಂದು ಆಡಳಿತರೂಢ ಬಿಜೆಪಿ ಪ್ರತಿಪಾದಿಸಿದೆ. ಆದರೆ, ವಿಪಕ್ಷಗಳು ಇದನ್ನು ಮುಸ್ಲಿಂ ಸಮುದಾಯದ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿ ಮತ್ತು ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿನ ಹಸ್ತಕ್ಷೇಪ ಎಂದು ಹರಿಹಾಯ್ದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.