ಗೌರವ್ ಗೊಗೋಯ್
ನವದೆಹಲಿ: ಸಂಸದೀಯ ಜಂಟಿ ಸಮಿತಿಯು ಸರ್ಕಾರದ ರಬ್ಬರ್ ಸ್ಟಾಂಪ್ ಆಗಿದೆ ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೋಯ್ ಸೋಮವಾರ ಟೀಕಿಸಿದ್ದಾರೆ.
ವಕ್ಫ್ ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿಯು ಆಡಳಿತಾರೂಢ ಸದಸ್ಯರು ಪ್ರಸ್ತಾಪಿಸಿದ ಎಲ್ಲಾ ತಿದ್ದುಪಡಿಗಳನ್ನು ಅಂಗೀಕರಿಸಿ, ಪ್ರತಿಪಕ್ಷಗಳ ಸಂಸದರ ತಿದ್ದುಪಡಿಗಳನ್ನು ತಿರಸ್ಕರಿಸಿರುವುದಕ್ಕೆ ಅವರು ಹೀಗೆ ಹೇಳಿದ್ದಾರೆ.
ವಿರೋಧ ಪಕ್ಷದ ಸದಸ್ಯರ ಪ್ರಸ್ತಾಪಗಳನ್ನು ತಿರಸ್ಕರಿಸಿರುವುದು ಸಂಸತ್ತಿನ ಸಮಿತಿಗಳನ್ನು ಬುಲ್ಡೋಜ್ ಮಾಡಲಾಗುತ್ತಿದೆ ಎನ್ನುವುದು ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.
ಜಂಟಿ ಸಮಿತಿಯು ತನ್ನ ಸಾಂವಿಧಾನಿಕ ಕರ್ತವ್ಯ ಪರಿಶೀಲನೆಯಿಂದ ತಪ್ಪಿಸಿಕೊಳ್ಳುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್ ಆಗಿದೆ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.