ADVERTISEMENT

ಚಲಿಸುತ್ತಿದ್ದ ಟ್ರಕ್‌ಗೆ ಹೊತ್ತಿಕೊಂಡ ಬೆಂಕಿ: ಮುಂದೇನಾಯ್ತು? ವಿಡಿಯೊ ನೋಡಿ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2021, 6:23 IST
Last Updated 1 ಏಪ್ರಿಲ್ 2021, 6:23 IST

ಭುವನೇಶ್ವರ: ಒಡಿಶಾದ ಭದ್ರಾಕ್‌ನ ಗನಿಗಂಜ್‌ನಲ್ಲಿ ಚಲಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ವಾಹನವನ್ನು ನೀರಿದ್ದ ಪ್ರದೇಶಕ್ಕೆ ಕೊಂಡೊಯ್ದಿದ್ದಾನೆ. ಸ್ಥಳಿಯರ ಸಹಾಯದೊಂದಿಗೆ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಅಗ್ನಿ ಅವಘಡದಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.