ADVERTISEMENT

Parliament: 'ಮೋದಿ ಅದಾನಿ ಏಕ್ ಹೈ' ಜಾಕೆಟ್ ಧರಿಸಿ ವಿಪಕ್ಷಗಳ ಪ್ರತಿಭಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಡಿಸೆಂಬರ್ 2024, 6:13 IST
Last Updated 5 ಡಿಸೆಂಬರ್ 2024, 6:13 IST
<div class="paragraphs"><p>ಪ್ರಿಯಾಂಕಾ ಗಾಂಧಿ ವಾದ್ರಾ (ಮಧ್ಯದಲ್ಲಿ), ರಾಹುಲ್ ಗಾಂಧಿ (ಬಲಬದಿ)</p></div>

ಪ್ರಿಯಾಂಕಾ ಗಾಂಧಿ ವಾದ್ರಾ (ಮಧ್ಯದಲ್ಲಿ), ರಾಹುಲ್ ಗಾಂಧಿ (ಬಲಬದಿ)

   

(ಪಿಟಿಐ ಚಿತ್ರ)

ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಿರುವ ವಿರೋಧ ಪಕ್ಷಗಳ ನಾಯಕರು, ಇಂದು (ಗುರುವಾರ) ಸಹ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

'ಮೋದಿ ಅದಾನಿ ಏಕ್ ಹೈ', 'ಅದಾನಿ ಸೇಫ್ ಹೈ' ಎಂದು ಬರೆದಿರುವ ಜಾಕೆಟ್ ಧರಿಸಿ ವಿನೂತನ ರೀತಿಯಲ್ಲಿ ವಿಪಕ್ಷಗಳ ಸದಸ್ಯರು ಪ್ರತಿಭಟಿಸಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ವಿಪಕ್ಷಗಳ ನಾಯಕರು ಪ್ರಧಾನಿ ಮೋದಿ ಹಾಗೂ ಉದ್ಯಮಿ ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, 'ಅದಾನಿ ವಿರುದ್ಧ ಮೋದಿ ತನಿಖೆಗೆ ಆದೇಶಿಸಲು ಸಾಧ್ಯವಿಲ್ಲ. ಏಕೆಂದರೆ ಹಾಗೇ ಮಾಡಿದರೆ ಸ್ವತಃ ಅವರೇ ತನಿಖೆ ಎದುರಿಸಬೇಕಾಗುತ್ತದೆ. ಮೋದಿ-ಅದಾನಿ ಒಂದೇ ಆಗಿದ್ದಾರೆ. ಇಬ್ಬರಲ್ಲ ಒಂದೇ' ಎಂದು ಆರೋಪಿಸಿದ್ದಾರೆ.

ಅದಾನಿ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.