ADVERTISEMENT

ನೋಡಿ: ಯಸ್ ಚಂಡಮಾರುತ– ಸಮುದ್ರದಲ್ಲಿ ಅಲೆಗಳ ಅಬ್ಬರ

​ಪ್ರಜಾವಾಣಿ ವಾರ್ತೆ
Published 25 ಮೇ 2021, 16:53 IST
Last Updated 25 ಮೇ 2021, 16:53 IST

ಭುವನೇಶ್ವರ: ತೌತೆ ಬಳಿಕ ಯಸ್ ಚಂಡಮಾರುತದ ಭೀತಿ ಶುರುವಾಗಿದೆ. ನಾಳೆ ಒಡಿಶಾದ ಬಾಲಸೋರ್‌ನಲ್ಲಿ ಯಸ್ ಚಂಡಮಾರುತವು ಧರೆಗಪ್ಪಿಳಿಸುವ ಸಾಧ್ಯತೆ ಇದ್ದು, ಈಗಾಗಲೇ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ..ಮುಂದಿನ 12 ಗಂಟೆಗಳಲ್ಲಿ ಯಸ್ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಹೀಗಾಗಿ, ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಲಕ್ಷಾಂತರ ಮಂದಿಯನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.ಒಡಿಶಾದ ಬಾಲಸೂರ‌್‌ ಜಿಲ್ಲೆಯಲ್ಲಿ ಅತಿ ಹೆಚ್ಚು 74,132 ಮಂದಿಯನ್ನು, ನಂತರ ಭದ್ರಕ್‌ ಜಿಲ್ಲೆಯಲ್ಲಿ 73,103 ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ಯಸ್‌ ಚಂಡಮಾರುತವು ಬುಧವಾರ ಬೆಳಗ್ಗೆ ಒಡಿಶಾದ ಭದ್ರಕ್‌ ಜಿಲ್ಲೆಯ ಧಾಮರಾ ಬಂದರಿಗೆ ಅಪ್ಪಳಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ವಾಣಿಜ್ಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ADVERTISEMENT

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.