
ಪಿಟಿಐ
ಬಾಂಕಾ: ಮೊದಲ ಹಂತದ ಚುನಾವಣೆಗೂ ಮುನ್ನ ಬಿಹಾರದಲ್ಲಿ ಎನ್‌ಡಿಎ ಪರ ಸ್ಪಷ್ಟ ಅಲೆಯಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಹೇಳಿದ್ದಾರೆ.
ಇಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಆಡಳಿತದಲ್ಲಿದ್ದ ವೇಳೆ ಆರ್‌ಜೆಡಿ ಜನರಿಗೆ ಬೆದರಿಕೆ ಹಾಕುತ್ತಿತ್ತು ಮತ್ತು ಅದರ ನಾಯಕರು ಬಿಹಾರಕ್ಕಾಗಿ ಏನೂ ಕೆಲಸ ಮಾಡಲಿಲ್ಲ’ ಎಂದು ಆರೋಪಿಸಿದ್ದಾರೆ.
‘ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಪ್ರಕರಣವಿಲ್ಲ. ಆಡಳಿತಾರೂಢ ಮೈತ್ರಿಕೂಟವು ಮೂರನೇ ಎರಡರಷ್ಟು ಬಹುಮತದೊಂದಿಗೆ ರಾಜ್ಯದಲ್ಲಿ ಮುಂದಿನ ಸರ್ಕಾರವನ್ನು ರಚಿಸುತ್ತದೆ’ ಎಂದು ಪ್ರತಿಪಾದಿಸಿದ್ದಾರೆ.
ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ‘ಗಡಿ ಪ್ರದೇಶಗಳಲ್ಲಿ ಉತ್ತಮ ರಸ್ತೆ ನಿರ್ಮಿಸುವುದನ್ನು ಕಾಂಗ್ರೆಸ್ ಎಂದಿಗೂ ಬಯಸಿರಲಿಲ್ಲ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.