ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡುವಿನಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಈವರೆಗೆ 79 ಮಂದಿ ಮೃತಪಟ್ಟಿದ್ದು, ಇನ್ನೂ ಹಲವು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವಿವಿಧ ಆಸ್ಪತ್ರೆಗಳ ಶವಾಗಾರಗಳಲ್ಲಿ ಮೃತ ದೇಹಗಳನ್ನು ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ 70 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.