ADVERTISEMENT

ವಯನಾಡ್ ಭೂಕುಸಿತ: ಪುನರ್ವಸತಿ ಕಲ್ಪಿಸುವಲ್ಲಿ ವಿಳಂಬ; ಪ್ರತಿಭಟನೆ

ಪಿಟಿಐ
Published 23 ಫೆಬ್ರುವರಿ 2025, 7:31 IST
Last Updated 23 ಫೆಬ್ರುವರಿ 2025, 7:31 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ವಯನಾಡ್ (ಕೇರಳ): ಕಳೆದ ಜುಲೈನಲ್ಲಿ ಸಂಭವಿಸಿದ ವಯನಾಡ್‌ ಭೂಕುಸಿತದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ವಿಳಂಬವಾಗಿರುವುದನ್ನು ಖಂಡಿಸಿ ಸಂತ್ರಸ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ನಡೆಸುತ್ತಿದ್ದ ಮೆರವಣಿಗೆಯನ್ನು ಪೊಲೀಸರು ತಡೆದಿದ್ದು, ಚೂರಲ್‌ಮಲದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ADVERTISEMENT

ಇಂದು (ಭಾನುವಾರ) ಬೆಳಿಗ್ಗೆ 9ಗಂಟೆಗೆ ಭೂಕುಸಿತ ಪೀಡಿತ ಪ್ರದೇಶದಲ್ಲಿ ಪ್ರತಿಭಟನಾಕಾರರು ತಾತ್ಕಾಲಿಕ ಗುಡಿಸಲುಗಳನ್ನು ನಿರ್ಮಿಸುವ ಮೂಲಕ ಪ್ರತಿಭಟನೆ ಪ್ರಾರಂಭಿಸಿದ್ದರು. ಬಳಿಕ ಚೂರಲ್‌ಮಲದ ಬೈಲಿ ಸೇತುವೆಯ ಬಳಿ ಪೊಲೀಸರ ತಂಡ ಪ್ರತಿಭಟನಾ ಮೆರವಣಿಗೆಯನ್ನು ತಡೆದಿದೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.

ಜನ ಶಬ್ದಂ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಭೂಕುಸಿತ ಪೀಡಿತ ಪ್ರದೇಶದಲ್ಲಿ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದ ಕಾರಣ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಬೆನ್ನಲ್ಲೇ ನಾಳೆ (ಸೋಮವಾರ) ವಯನಾಡ್‌ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಮಿತಿ ಹೇಳಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಳೆದ ವರ್ಷ ಜುಲೈ 30ರಂದು ವಯನಾಡಿನ ಮುಂಡಕ್ಕೈ, ಚೂರಲ್‌ಮಲ ಪ್ರದೇಶಗಳಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಸುಮಾರು 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಅನೇಕರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.