ತಿರುವನಂತಪುರ: ಇತ್ತೀಚೆಗೆ ವಯನಾಡ್‌ನ ಕಾಫಿ ತೋಟವೊಂದರ ಕಾರ್ಮಿಕ ಮಹಿಳೆ ರಾಧಾ ಅವರನ್ನು ಬಲಿ ತೆಗೆದುಕೊಂಡಿದ್ದ ಹುಲಿಯ ಕಳೇಬರ ಸೋಮವಾರ ಬೆಳಗಿನ ಜಾವ ವಯನಾಡ್‌ನ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು.
ಅಚ್ಚರಿ ಎಂದರೆ ಕಳೇಬರದ ಪರೀಕ್ಷೆಯ ವೇಳೆ ಹುಲಿಯ ಹೊಟ್ಟೆಯಲ್ಲಿ ರಾಧಾ ಅವರ ಕೂದಲು, ಬಟ್ಟೆಯ ತುಂಡು ಹಾಗೂ ಕಿವಿ ಓಲೆಗಳು ಕಂಡುಬಂದವು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ರಾತ್ರಿ 12.30ರ ಸುಮಾರಿಗೆ ಹುಲಿಯು ಈ ಭಾಗದಲ್ಲಿ ಇರುವ ಬಗ್ಗೆ ತಿಳಿದು ಬಂದಿತ್ತು. 2.30ರ ಸುಮಾರಿಗೆ ಹುಲಿ ಕಾಣಿಸಿಕೊಂಡಿತು. ಹುಲಿಯನ್ನು ಶಾಂತಗೊಳಿಸುವ ನಮ್ಮ ಯತ್ನ ಫಲ ನೀಡಲಿಲ್ಲ. ಬಳಿಕ ಬೆಳಗಿನ ಜಾವ ಹುಲಿಯ ಕಳೇಬರ ಪತ್ತೆಯಾಯಿತು. ಕಳೇಬರದಲ್ಲಿ ಗಾಯಗಳು ಕಂಡುಬಂದಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್. ದೀಪಾ ಮಾಹಿತಿ ನೀಡಿದ್ದಾರೆ.
ಮತ್ತೊಂದು ಹುಲಿಯೊಂದಿಗೆ ಗಲಾಟೆಯಾಗಿರುವುದೇ ಈ ಹುಲಿಯ ಸಾವಿಗೆ ಕಾರಣ ಇರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.