ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಇಲ್ಲ: ಪ್ರತಿಭಟನೆ ನಿಲ್ಲಿಸಿ-ಮಮತಾ ಬ್ಯಾನರ್ಜಿ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 11:29 IST
Last Updated 14 ಡಿಸೆಂಬರ್ 2019, 11:29 IST
   

ಪಶ್ಚಿಮ ಬಂಗಾಳ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರುವುದಿಲ್ಲ, ಪ್ರತಿಭಟನೆ ನಡೆಸಿಅಶಾಂತಿ ಉಂಟು ಮಾಡಬೇಡಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ಜನಜೀವನಕ್ಕೆ ಅಡಚಣೆ ಉಂಟು ಮಾಡಬಾರದು, ಅಲ್ಲದೆ, ಯಾವುದೇ ರೀತಿಯ ಹಿಂಸೆಯಲ್ಲಿ ಭಾಗಿಯಾಗಬಾರದು ಎಂದು ಪಶ್ಚಿಮ ಬಂಗಾಳದ ಜನರಲ್ಲಿಮನವಿ ಮಾಡಿದ್ದಾರೆ. ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ. ಜಾರಿಗೆ ತರಬಾರದು ಎಂದುರಸ್ತೆ ತಡೆ ನಡೆಸುವುದು, ಬಂದ್ ಮಾಡುವುದು, ಪ್ರತಿಭಟನೆ ಮಾಡುವುದುಸೇರಿದಂತೆ ಕಾನೂನು ಕೈಗೆತ್ತಿಕೊಳ್ಳದಂತೆ ಮನವಿ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಕುರಿತಂತೆಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇದರಿಂದಾಗಿ ಕೆಲ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾಯ್ದೆಗೆ ರಾಜ್ಯ ಸಭೆಯಲ್ಲಿ ಒಪ್ಪಿಗೆ ದೊರೆಯುತ್ತಿದ್ದಂತೆಅಸ್ಸಾಂನಲ್ಲಿ ಪ್ರತಿಭಟನೆಗಳು ಆರಂಭವಾಗಿದ್ದು ಕರ್ಫ್ಯೂ ಜಾರಿ ಮಾಡಿ ನಿಯಂತ್ರಣಕ್ಕೆ ತರಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.