ADVERTISEMENT

‘ಸುಪ್ರೀಂ’ ಚಾಟಿ: ಹುಲಿ ಸಂರಕ್ಷಿತ ಅರಣ್ಯ ನಿರ್ದೇಶಕ ನೇಮಕ ಹಿಂಪಡೆದ ಉತ್ತರಾಖಂಡ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 20:33 IST
Last Updated 4 ಸೆಪ್ಟೆಂಬರ್ 2024, 20:33 IST
–
   

ನವದೆಹಲಿ: ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಉತ್ತರಾಖಂಡ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ರಾಹುಲ್‌ ಅವರನ್ನು ರಾಜಾಜಿ ಹುಲಿ ಸಂರಕ್ಷಿತ ಅರಣ್ಯ ನಿರ್ದೇಶಕ ಸ್ಥಾನದಿಂದ ತೆಗೆದು ಹಾಕಿದೆ.

ಅವರನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಿ ಉತ್ತರಾಖಂಡ ಸರ್ಕಾರ ಆದೇಶಿಸಿದೆ.

ತರಾಟೆಗೆ: ಅಕ್ರಮವಾಗಿ ಮರಗಳನ್ನು ಕಡಿದ ಆರೋಪ ಎದುರಿಸುತ್ತಿರುವ ಐಪಿಎಸ್‌ ಅಧಿಕಾರಿ ರಾಹುಲ್‌ ಅವರನ್ನು ರಾಜಾಜಿ ಹುಲಿ ಸಂರಕ್ಷಿತ ಅರಣ್ಯ ನಿರ್ದೇಶಕರನ್ನಾಗಿ ನೇಮಕ ಮಾಡಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಧಾಮಿ ಅವರನ್ನು ಸುಪ್ರೀಂ ಕೋರ್ಟ್‌ ಬುಧವಾರ ತರಾಟೆಗೆ ತೆಗೆದುಕೊಂಡಿತು.

ADVERTISEMENT

ನ್ಯಾಯಮೂರ್ತಿ ಬಿ.ಆರ್‌.ಗವಾಯಿ, ನ್ಯಾಯಮೂರ್ತಿಗಳಾದ ಪಿ.ಕೆ.ಮಿಶ್ರಾ ಹಾಗೂ ಕೆ.ವಿ.ವಿಶ್ವನಾಥನ್‌ ಅವರಿದ್ದ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.

‘ಸರ್ಕಾರದ ಮುಖಸ್ಥರು ರಾಜರಂತೆ ವರ್ತಿಸಬಾರದು. ಈಗ ನಾವು ನಿರಂಕುಶಾಧಿಕಾರಿ ಆಳ್ವಿಕೆಯಲ್ಲೂ ಇಲ್ಲ’ ಎಂದು ಪೀಠ ಹೇಳಿತು.

ಇದಕ್ಕೆ ಪ್ರತಿಕ್ರಿಯಿಸಿದ ಉತ್ತರಾಖಂಡ ಸರ್ಕಾರ, ‘ರಾಹುಲ್‌ ಅವರನ್ನು ರಾಜಾಜಿ ಹುಲಿ ಸಂರಕ್ಷಿತ ಅರಣ್ಯ ನಿರ್ದೇಶಕರನ್ನಾಗಿ ನೇಮಕವನ್ನು ಸೆ.3ರಂದು ರದ್ದುಪಡಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿತು.

ರಾಹುಲ್‌ ಅವರು ಇದಕ್ಕೂ ಮುನ್ನ ಕಾರ್ಬೆಟ್‌ ಹುಲಿ ಸಂರಕ್ಷಿತ ಅರಣ್ಯ ನಿರ್ದೇಶಕರಾಗಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.