ADVERTISEMENT

ಪೂರ್ವ ಲಡಾಖ್‌ನಿಂದ ಸೇನೆ ಹಿಂಪಡೆಯುವಿಕೆ ಪ್ರಕ್ರಿಯೆ ಪೂರ್ಣಗೊಳಿಸಲಿ ಚೀನಾ: ಭಾರತ

ಪಿಟಿಐ
Published 5 ಮಾರ್ಚ್ 2021, 17:06 IST
Last Updated 5 ಮಾರ್ಚ್ 2021, 17:06 IST
ಸಾಂದರ್ಭಿಕ ಚಿತ್ರ – ಎಎಫ್‌ಪಿ
ಸಾಂದರ್ಭಿಕ ಚಿತ್ರ – ಎಎಫ್‌ಪಿ   

ನವದೆಹಲಿ: ಪೂರ್ವ ಲಡಾಖ್‌ನ ಬಾಕಿ ಇರುವ ಪ್ರದೇಶಗಳಿಂದಲೂ ಸೇನೆ ಹಿಂಪಡೆಯುವ ನಿಟ್ಟಿನಲ್ಲಿ ಚೀನಾವು ಕಾರ್ಯಪ್ರವೃತ್ತವಾಗುವುದನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಭಾರತ ಹೇಳಿದೆ.

ದ್ವಿಪಕ್ಷೀಯ ಸಮಾಲೋಚನೆ ಕಾರ್ಯವಿಧಾನಗಳ ಮೂಲಕ ಸೇನೆ ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜತೆಯಾಗಿ ಕೆಲಸ ಮಾಡುವುದನ್ನು ಎದುರುನೋಡುತ್ತಿದ್ದೇವೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.

‘ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಕಳೆದ ವಾರ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ವಿವರವಾದ ಮಾತುಕತೆ ನಡೆಸಿದ್ದಾರೆ ಮತ್ತು ಒಮ್ಮತಕ್ಕೆ ಬಂದಿದ್ದಾರೆ’ ಎಂದು ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್ ಶ್ರೀವಾಸ್ತವ ತಿಳಿಸಿದ್ದಾರೆ.

‘ಎರಡೂ ಕಡೆಯವರು ಪೂರ್ವ ಲಡಾಖ್‌ನಿಂದ ಸೇನೆ ಹಿಂಪಡೆಯುವಿಕೆ ಪೂರ್ಣಗೊಳಿಸುವುದು ಶಾಂತಿ ಮತ್ತು ನೆಮ್ಮದಿಯ ಸ್ಥಾಪನೆಗೆ ಕಾರಣವಾಗಲಿದೆ. ದ್ವಿಪಕ್ಷೀಯ ಬಾಂಧವ್ಯದ ವೃದ್ಧಿಗೆ ಪೂರಕವಾಗಲಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.