ADVERTISEMENT

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಷಡ್ಯಂತ್ರ: ಚುನಾವಣಾ ಆಯೋಗಕ್ಕೆ ದೂರು

ಏಜೆನ್ಸೀಸ್
Published 4 ಫೆಬ್ರುವರಿ 2019, 18:24 IST
Last Updated 4 ಫೆಬ್ರುವರಿ 2019, 18:24 IST
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್   

ನವದೆಹಲಿ:ಪಶ್ಚಿಮಬಂಗಾಳದಲ್ಲಿ ಸಿಬಿಐ ಮತ್ತು ಮಮತಾ ಬ್ಯಾನರ್ಜಿ ನಡುವಿನ ಜಟಾಪಟಿ ತಾರಕಕ್ಕೇರಿರುವ ಸಂದರ್ಭದಲ್ಲಿಯೇ, ಇತ್ತರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ನಿಯೋಗವೊಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಅಲ್ಲಿ ನಡೆಯುತ್ತಿರುವ ಬಿಜೆಪಿ ವಿರೋಧಿ ಘಟನೆಗಳ ಬಗ್ಗೆ ದೂರು ನೀಡಿದೆ.

ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಂಗಾಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಿರ್ಮಲಾ ಸೀತಾರಾಮನ್‌, ಮುಖ್ತರ್‌ ಅಬ್ಬಾಸ್‌ ನಖ್ವಿ, ಭೂಪೇಂದ್ರ ಯಾದವ್‌ ಅವರನ್ನು ಒಳಗೊಂಡ ನಿಯೋಗ ಚುನಾವಣಾ ಆಯೋಗದ ಗಮನಕ್ಕೆ ತಂದಿದೆ.

‘ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡುಪಶ್ಚಿಮ ಬಂಗಾಳದಲ್ಲಿ ಮುಕ್ತ ಹಾಗೂ ನ್ಯಾಯಯುತ ವಾತಾವರಣನಿರ್ಮಿಸುವ ಉದ್ದೇಶದಿಂದ, ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಬೆಂಬಲದಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ ಚುನಾವಣಾ ಆಯೋಗಕ್ಕೆಮಾಹಿತಿ ನೀಡಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸಗಳನ್ನು ಟಿಎಂಸಿ ಪಕ್ಷ ಮಾಡುತ್ತಿದೆ ಎನ್ನುವುದು ಸೇರಿ ಅನೇಕ ವಿಷಯಗಳ ಚರ್ಚಿಸಿದ್ದೇವೆ’ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ADVERTISEMENT

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಿಧ ಕಾರಣಗಳನ್ನು ನೀಡಿ ಬಿಜೆಪಿ ಸಭೆಗಳಿಗೆ ಅನುಮತಿ ನಿರಾಕರಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಇತ್ತೀಚೆಗಷ್ಟೆ ಉತ್ತರ ದಿನ್‌ಜ್ಪುರದಲ್ಲಿ ಆಯೋಜನೆಗೊಂಡಿದ್ದ ಬಿಜೆಪಿ ಸಮಾವೇಶಕ್ಕೆಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭಾಗವಹಿಸದಂತೆ ನಿರ್ಬಂಧ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.