ADVERTISEMENT

ಪಾಂಗಾಂಗ್ ಸರೋವರದ ಬಳಿ ಚೀನಾ ಸೇತುವೆ: ಪರಿಸ್ಥಿತಿ ಅವಲೋಕಿಸುತ್ತಿದ್ದೇವೆ ಎಂದ ಭಾರತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಮೇ 2022, 13:21 IST
Last Updated 19 ಮೇ 2022, 13:21 IST
ಪಾಂಗಾಂಗ್ ಸರೋವರ
ಪಾಂಗಾಂಗ್ ಸರೋವರ   

ನವದೆಹಲಿ: ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪೂರ್ವ ಲಡಾಖ್‌ನ ಪಾಂಗಾಂಗ್‌ ಸರೋವರ ಪ್ರದೇಶದಲ್ಲಿ ಎರಡನೇ ಸೇತುವೆ ನಿರ್ಮಿಸುತ್ತಿರುವ ಬಗ್ಗೆ ಭಾರತ ಸರ್ಕಾರ ಗುರುವಾರ ಅಧಿಕೃತ ಪ್ರತಿಕ್ರಿಯೆ ನೀಡಿದೆ.

‘ಸೇತುವೆಯ ಕುರಿತ ವರದಿಗಳನ್ನು ನಾವು ಗಮನಿಸಿದ್ದೇವೆ. ಪರಿಸ್ಥಿತಿಯ ಅವಲೋಕಿಸುತ್ತಿದ್ದೇವೆ. ಸೇತುವೆ ನಿರ್ಮಾಣಗೊಂಡಿರುವ ಪ್ರದೇಶವು ಆಕ್ರಮಿತ ಪ್ರದೇಶ ಎಂಬುದಂತೂ ನಿಜ. ಚೀನಾ ಕಡೆಯವರೊಂದಿಗೆ ಮಾತುಕತೆ ನಡೆಯಲಿದೆ’ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದಾರೆ.

ಚೀನಾ ಸೇನೆ ಮತ್ತು ಶಸ್ತ್ರಸಜ್ಜಿತ ವಾಹನಗಳ ಸುಗಮ ಸಂಚಾರಕ್ಕಾಗಿ ಪಾಂಗಾಂಗ್‌ ಸರೋವರ ಪ್ರದೇಶದಲ್ಲಿ ಎರಡನೇ ಸೇತುವೆ ನಿರ್ಮಿಸುತ್ತಿರುವುದನ್ನು ಉಪಗ್ರಹ ಚಿತ್ರಗಳು ಬಹಿರಂಗಪಡಿಸಿವೆ.

ADVERTISEMENT

ಈ ಪ್ರದೇಶದಲ್ಲಿ ಒಂದು ತಿಂಗಳ ಹಿಂದೆ ಸಣ್ಣ ಸೇತುವೆಯನ್ನು ನಿರ್ಮಿಸಲಾಗಿತ್ತು.

ಹೊಸ ಸೇತುವೆಯು ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಪಿಎಲ್‌ಎ ಪಡೆಗಳ ಪ್ರಧಾನ ಕೇಂದ್ರವಾದ ಖುರ್ನಾಕ್ ಫೋರ್ಟ್ ಮತ್ತು ರುಟೋಗ್ ನಡುವೆ 180 ಕಿ.ಮೀ. ಅಂತರವನ್ನು ಕಡಿಮೆ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.