
ಜಮ್ಮು: ‘ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಜಮ್ಮು ವರ್ಸಸ್ ಕಾಶ್ಮೀರ ಎಂಬುದನ್ನು ಸೃಷ್ಟಿಸಲು ಯತ್ನಿಸಿದರು. ಆದರೂ ನಾನು ಗೆದ್ದಿದ್ದೇನೆ. ಪಕ್ಷದ ಪಾಲಿಗೆ ಇದೊಂದು ಐತಿಹಾಸಿಕ ಜಯ’ ಎಂದು ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಸತ್ ಶರ್ಮಾ ಅವರು ಅಭಿಪ್ರಾಯಪಟ್ಟರು.
ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಶರ್ಮಾ ಅವರನ್ನು ಜಮ್ಮುವಿನಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷವು ಮೂರು ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಜೆಪಿ ಒಂದು ಸ್ಥಾನ ಗೆದ್ದುಕೊಂಡಿತ್ತು.
‘ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ನೀಡಿ ಎಂದು ಕೇಳಿಕೊಂಡಿದ್ದೆವು. ನಮ್ಮ ಒಟ್ಟು ಮತಗಳಿಗಿಂತ ಈ ಬಾರಿಗೆ ನಮಗೆ ಹೆಚ್ಚಿನ ನಾಲ್ಕು ಮತಗಳು ಬಂದಿವೆ. ಮುಂದಿನ ಬಾರಿ 40 ಮತಗಳು ನಮ್ಮ ಪರವಾಗಿ ಬೀಳಲಿವೆ’ ಎಂದು ಶರ್ಮಾ ಅವರು ಪತ್ರಕರ್ತರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.