ADVERTISEMENT

ಖಾಸಗಿ ವಾಹನದಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್‌ ಕಡ್ಡಾಯ: ದೆಹಲಿ ಹೈಕೋರ್ಟ್‌

ಪಿಟಿಐ
Published 7 ಏಪ್ರಿಲ್ 2021, 7:53 IST
Last Updated 7 ಏಪ್ರಿಲ್ 2021, 7:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ:ಕೋವಿಡ್‌–19 ಪಿಡುಗು ತೀವ್ರವಾಗಿ ಹರಡುತ್ತಿರುವುದರಿಂದ, ಖಾಸಗಿ ವಾಹನವನ್ನು ಚಾಲನೆ ಮಾಡುತ್ತಾ, ಒಬ್ಬರೇ ಪ್ರಯಾಣಿಸುತ್ತಿದ್ದರೂ ಸಹ ಮಾಸ್ಕ್‌ ಧರಿಸುವುದು ಕಡ್ಡಾಯ ಎಂದು ದೆಹಲಿ ಹೈಕೋರ್ಟ್‌ ಬುಧವಾರ ಹೇಳಿದೆ.

‘ಮುಖ ಮತ್ತು ಮೂಗನ್ನು ಮುಚ್ಚುವ ರೀತಿಯಲ್ಲಿ ಧರಿಸುವ ಮಾಸ್ಕ್‌ ಸುರಕ್ಷಾ ಕವಚ ಇದ್ದಂತೆ. ಇದರಿಂದ ಕೊರೊನಾ ಸೋಂಕು ಪ್ರಸರಣವಾಗದಂತೆ ತಡೆಯಬಹುದು’ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್‌ ಹೇಳಿದರು.

ಖಾಸಗಿ ವಾಹನದಲ್ಲಿ ಒಬ್ಬರೇ ಪ್ರಯಾಣಿಸುವ ನೆಪವೊಡ್ಡಿ ಮಾಸ್ಕ್‌ ಧರಿಸದೇ ಇರುವವರಿಗೆ ದಂಡ ವಿಧಿಸುವ ದೆಹಲಿ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿ ಮಧ್ಯಪ್ರವೇಶಿಸಲು ಅವರು ನಿರಾಕರಿಸಿದರು.

ADVERTISEMENT

ಖಾಸಗಿ ವಾಹನದಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೂ, ಅದನ್ನು ಸಾರ್ವಜನಿಕ ಸ್ಥಳ ಎಂದೇ ಪರಿಗಣಿಸಲಾಗುತ್ತದೆ ಎಂದು ನ್ಯಾಯಮೂರ್ತಿ ಸಿಂಗ್‌ ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.