ADVERTISEMENT

ತಮಿಳುನಾಡು: ಚೆನ್ನೈನಲ್ಲಿ ಮಾಸ್ಕ್ ಕಡ್ಡಾಯ, ನಿಯಮ ಉಲ್ಲಂಘಿಸಿದರೆ ₹500 ದಂಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜುಲೈ 2022, 11:42 IST
Last Updated 5 ಜುಲೈ 2022, 11:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಅಲ್ಲಿನಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.

ನಿಯಮ ಉಲ್ಲಂಘಿಸಿದರೆ ₹500 ದಂಡ ವಿಧಿಸಲಾಗುವುದೆಂದು ಪಾಲಿಕೆ ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 13,086 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ಸದ್ಯ ದೇಶದಲ್ಲಿ 1,14,475 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 2.90ಕ್ಕೆ ಇಳಿದಿದೆ.

ಸೋಮವಾರ 16,135 ಪ್ರಕರಣಗಳು ಪತ್ತೆಯಾಗಿದ್ದವು. ಪಾಸಿಟಿವಿಟಿ ದರ ಶೇ 4.85 ರಷ್ಟಿತ್ತು.

ತಮಿಳುನಾಡಿನಲ್ಲಿ ಇದುವರೆಗೆ 34,85,429 ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 38,026 ಮಂದಿ ಮೃತಪಟ್ಟಿದ್ದಾರೆ.

34,31,787 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸದ್ಯ 15,616 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.