ADVERTISEMENT

ಮುಂದಿನ 48 ಗಂಟೆಯಲ್ಲಿ ದೇಶದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಏಜೆನ್ಸೀಸ್
Published 13 ಆಗಸ್ಟ್ 2020, 14:55 IST
Last Updated 13 ಆಗಸ್ಟ್ 2020, 14:55 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಹಾಗೂ ಮುಂಗಾರು ಮಾರುತಗಳ ತೇವಾಂಶ ಸಂಯೋಜನೆಗೊಳ್ಳುವ ಸಾಧ್ಯತೆ ಇರುವುದರಿಂದ ಮುಂದಿನ ಎರಡು ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಧ್ಯಪ್ರದೇಶ, ಒಡಿಶಾ, ಆಂಧ್ರ, ತೆಲಂಗಾಣ, ಕೇರಳ, ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್‌ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಮುನ್ಸೂಚನೆ ನೀಡಿದೆ.

ADVERTISEMENT

ಅರಬ್ಬಿ ಸಮುದ್ರದ ನೈರುತ್ಯ ಮಾರುತಗಳು ಮತ್ತು ಬಂಗಾಳ ಕೊಲ್ಲಿಯ ಪೂರ್ವಮಾರುತಗಳ ಸಂಯೋಜನೆಯ ಪರಿಣಾಮ ಮಳೆಯಾಗಲಿದೆ ಎಂದು ಐಎಂಡಿಯ ಪ್ರಾದೇಶಿಕ ಮುನ್ಸೂಚನಾ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.