ADVERTISEMENT

ಪಿ.ಚಿದಂಬರಂಗೆ ಬುಧವಾರವೂ ಮುಂದುವರಿದ ಸಂಕಟ

ಏಜೆನ್ಸೀಸ್
Published 21 ಆಗಸ್ಟ್ 2019, 10:47 IST
Last Updated 21 ಆಗಸ್ಟ್ 2019, 10:47 IST
   

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆನ್ಯಾಯಾಲಯದಿಂದಬುಧವಾರ ಮಧ್ಯಾಹ್ನವಾದರೂ ನಿರೀಕ್ಷಣಾ ಜಾಮೀನು ಸಿಗದ ಕಾರಣಸಂಕಟ ಮುಂದುವರಿದಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ವಿ. ರಮಣ ಅವರಿದ್ದ ಪೀಠದಲ್ಲಿ ಬುಧವಾರ ಬೆಳಿಗ್ಗೆ ವಿಚಾರಣೆ ನಡೆಸಿದರೂ ತಾಂತ್ರಿಕ ಕಾರಣಗಳಿಂದಾಗಿಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆಕಳುಹಿಸುತ್ತಿದ್ದೇನೆ. ಮುಖ್ಯನ್ಯಾಯಮೂರ್ತಿಯವರೇ ವಿಚಾರಣೆ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.

ಕೂಡಲೆ ಚಿದಂಬರಂ ಪರ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ತೆರಳಿದರೂಪ್ರಕರಣಗಳ ತುರ್ತು ವಿಚಾರಣಾ ಪಟ್ಟಿಯಲ್ಲಿ ಚಿದಂಬರಂ ಅರ್ಜಿಪರಿಗಣಿಸಿರಲಿಲ್ಲ. ಇದರಿಂದಾಗಿ ನ್ಯಾಯಾಲಯದ ಅಧಿಕಾರಿಗಳು ಇನ್ನೂ ತಮ್ಮ ಕಕ್ಷಿದಾರರ ಅರ್ಜಿಯನ್ನು ಪಟ್ಟಿಯಲ್ಲೇ ಸೇರಿಸದಿರುವುದು ಸರಿಯಲ್ಲ. ನನ್ನ ಕಕ್ಷಿದಾರ ಎಲ್ಲಿಯೂ ಓಡಿ ಹೋಗುವುದಿಲ್ಲ. ತಮ್ಮ ಅರ್ಜಿಯನ್ನು ತುರ್ತು ವಿಚಾರಣೆ ಪ್ರಕರಣಗಳ ಪಟ್ಟಿಯಲ್ಲಿ ಸೇರಿಸುವಂತೆ ಒತ್ತಾಯಿಸಿದ್ದಾರೆ.

ಆದರೆ, ರಂಜನ್ ಗೊಗೊಯಿ ಅವರು ಐವರು ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠದಲ್ಲಿ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಈ ಕಾರಣದಿಂದಾಗಿ ಪಿ.ಚಿದಂಬರಂ ಅವರ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿಲ್ಲ. ದೆಹಲಿ ಹೈಕೋರ್ಟ್ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದ್ದರಿಂದ ಬುಧವಾರ ಸಂಜೆಯೂ ಚಿದಂಬರಂಗೆ ಸಂಕಟ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.