ADVERTISEMENT

ಕೋವಿಡ್‌| ಮಹಾರಾಷ್ಟ್ರದ ಯವತಮಾಳ, ಅಮರಾವತಿಯಲ್ಲಿ ಮತ್ತೆ ಲಾಕ್‌ಡೌನ್‌

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೋವಿಡ್‌–19 ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 16:37 IST
Last Updated 18 ಫೆಬ್ರುವರಿ 2021, 16:37 IST
.
.   

ಮುಂಬೈ: ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಕಠಿಣ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ.

ಯವತಮಾಳ ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದ ಮುಂದಿನ ಹತ್ತು ದಿನಗಳ ಕಾಲ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ.

ಫೆಬ್ರುವರಿ 1ರಿಂದ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿವೆ. ಬುಧವಾರದವರೆಗೆ ಜಿಲ್ಲೆಯಲ್ಲಿ 606 ಸಕ್ರಿಯ ಪ್ರಕರಣಗಳಿದ್ದವು. ಸೋಂಕು ಹಬ್ಬದಂತೆ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಡಿ. ಸಿಂಗ್‌ ತಿಳಿಸಿದ್ದಾರೆ.

ADVERTISEMENT

ಅಮರಾವತಿಯಲ್ಲೂ ವಾರಾಂತ್ಯದಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 7ಗಂಟೆಯವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೋವಿಡ್‌–19 ಪ್ರಕರಣಗಳು ಮುಂಬೈ ಉಪನಗರ ಪ್ರದೇಶದಲ್ಲಿ ದಿಢೀರನೆ ಹೆಚ್ಚುತ್ತಿರುವುದರಿಂದ ಕಠಿಣ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ಒಂದು ಕಟ್ಟಡದಲ್ಲಿ ಐದಕ್ಕಿಂತ ಹೆಚ್ಚು ಜನರು ಸೋಂಕಿಗೆ ಒಳಗಾದರೆ ಅದನ್ನು ಸೀಲ್‌ ಮಾಡಲು ನಿರ್ಧರಿಸಲಾಗಿದೆ.

ಗುರುವಾರ ಮುಂಬೈ ಮಹಾನಗರದಲ್ಲಿ 736 ಮತ್ತು ಮುಂಬೈ ಮೆಟ್ರೊಪಾಲಿಟನ್‌ ಪ್ರದೇಶದಲ್ಲಿ (ಎಂಎಂಆರ್‌) 1,432 ಪ್ರಕರಣಗಳು ದೃಢಪಟ್ಟಿವೆ.

ಜನರು ಕೋವಿಡ್‌–19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮಕೈಗೊಳ್ಳಲು ಸುಮಾರು 4,800 ಮಾರ್ಷಲ್‌ಗಳನ್ನು ಬೃಹನ್‌ ಮುಂಬೈ ಮುನ್ಸಿಪಲ್‌ ಕಾರ್ಪೋರೇಷನ್‌ ನಿಯೋಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.