ADVERTISEMENT

ಮಣಿಪುರದಲ್ಲಿ ಹಿಂಸಾಚಾರ ನಡೆದಿಲ್ಲ, ನಡೆಸಿರುವುದು: ಮೋಹನ್‌ ಭಾಗವತ್‌

ಪಿಟಿಐ
Published 24 ಅಕ್ಟೋಬರ್ 2023, 6:02 IST
Last Updated 24 ಅಕ್ಟೋಬರ್ 2023, 6:02 IST
ಮೋಹನ್‌ ಭಾಗವತ್‌
ಮೋಹನ್‌ ಭಾಗವತ್‌   

ನಾಗ್ಪುರ: ಹಲವಾರು ವರ್ಷಗಳಿಂದ ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳು ಸಹಬಾಳ್ವೆಯಿಂದ ಬಾಳುತ್ತಿದ್ದಾರೆ. ಅದು ಹೇಗೆ ಇದ್ದಕ್ಕಿದ್ದಂತೆ ಹಿಂಸಾಚಾರ ಭುಗಿಲೆದ್ದಿತು? ಸಂಘರ್ಷದಿಂದ ಬಾಹ್ಯ ಶಕ್ತಿಗಳಿಗೆ ಪ್ರಯೋಜನವಿದೆ. ಬಾಹ್ಯ ಶಕ್ತಿಗಳು ಹಿಂಸಾಚಾರದಲ್ಲಿ ಕೆಲಸ ಮಾಡಿರುವ ಅನುಮಾನವಿದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದರು.

ನಾಗ್ಪುರದಲ್ಲಿ ನಡೆದ ಆರ್‌ಎಸ್ಎಸ್‌ ವಿಜಯದಶಮಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಮಣಿಪುರದಲ್ಲಿ ಹಿಂಸಾಚಾರ ನಡೆದಿಲ್ಲ, ನಡೆಸಿರುವುದು’ ಎಂದು ಹೇಳಿದರು.

‘ಹಿಂಸಾಚಾರದ ವೇಳೆ ಮಣಿಪುರಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿ ತಂಗಿದ್ದರು. ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಸಂಘದ ಕಾರ್ಯಕರ್ತರೂ ಶ್ರಮಿಸಿದ್ದರು’ ಎಂದು ಹೇಳಿದರು.

ADVERTISEMENT

‘ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಜನರ ಭಾವನೆಗಳನ್ನು ಕೆರಳಿಸುವ ಮೂಲಕ ಮತಗಳನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಇದರ ಬಗ್ಗೆ ಜನರು ಎಚ್ಚರದಿಂದಿರಬೇಕು. ದೇಶದ ಏಕತೆ, ಸಮಗ್ರತೆ, ಅಸ್ಮಿತೆ ಮತ್ತು ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.