ADVERTISEMENT

ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ವಿಮಾನಯಾನ ಸಂಸ್ಥೆಗಳ 350 ವಿಮಾನಗಳ ಹಾರಾಟ ರದ್ದು

ಶಮಿನ್‌ ಜಾಯ್‌
Published 1 ಮಾರ್ಚ್ 2026, 14:00 IST
Last Updated 1 ಮಾರ್ಚ್ 2026, 14:00 IST
   

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ವಾಯುಪ್ರದೇಶ ನಿರ್ಬಂಧದಿಂದಾಗಿ ದೆಹಲಿ ಮತ್ತು ಮುಂಬೈನಿಂದ ತೆರಳಬೇಕಿದ್ದ 225 ಸೇರಿದಂತೆ ಭಾರತದಿಂದ ತೆರಳಬೇಕಿದ್ದ 350 ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ ಎಂದು ವರದಿಯಾಗಿದೆ.

ಪಶ್ಚಿಮ ಏಷ್ಯಾ ದೇಶಗಳಿಗೆ ತೆರಳಬೇಕಿದ್ದ 444 ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸುವ ನಿರೀಕ್ಷೆಯಿತ್ತು. ಸದ್ಯ 350 ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಶನಿವಾರವೂ ದೇಶೀಯ ವಿಮಾನಯಾನ ಸಂಸ್ಥೆಗಳ 410 ವಿಮಾನಗಳನ್ನು ರದ್ದುಗೊಳಿಸಲಾಗಿತ್ತು.

‘ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ಅಗತ್ಯಕ್ಕೆ ತಕ್ಕಂತೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಒದಗಿಸುವಂತೆ ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣ ನಿರ್ವಾಹಕರು ಮತ್ತು ಇತರ ಪಾಲುದಾರರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ದೆಹಲಿ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 60 ಮತ್ತು ಆಗಮಿಸಬೇಕಿದ್ದ 40 ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ. ಮುಂಬೈ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 67 ಮತ್ತು ಆಗಮಿಸಬೇಕಿದ್ದ 58 ವಿಮಾನಗಳ ಹಾರಾಟ ರದ್ದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.