
ಪಿಟಿಐ
ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ವಿಮಾನಕ್ಕೆ ಕಾಯುತ್ತಿದ್ದ ದೃಶ್ಯ
– ಪಿಟಿಐ ಚಿತ್ರ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನಿಂದಾಗಿ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ವಿಮಾನ ಸೇವೆಯಲ್ಲಿ ಸೋಮವಾರವೂ ವ್ಯತ್ಯಯವಾಗಿತ್ತು.
* ದೆಹಲಿ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ ಮತ್ತು ಅಲ್ಲಿಗೆ ಬರಬೇಕಿದ್ದ 87 ಅಂತರರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು.
* ಕೊಲ್ಕತ್ತ ವಿಮಾನ ನಿಲ್ದಾಣದಲ್ಲಿ 20 ಅಂತರರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ
* ಭುವನೇಶ್ವರದಿಂದ ದುಬೈಗೆ ತೆರಳಬೇಕಿದ್ದ ಇಂಡಿಗೊ ವಿಮಾನ ಸಂಚಾರವನ್ನು ರದ್ದುಗೊಳಿಸಲಾಯಿತು
* ಭಾರತದ ವಿಮಾನಯಾನ ಸಂಸ್ಥೆಗಳು ಕಳೆದ ಎರಡು ದಿನಗಳಲ್ಲಿ 760 ವಿಮಾನಗಳ ಸಂಚಾರವನ್ನು ರದ್ದುಗೊಳಿಸಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.