ADVERTISEMENT

ವೈದ್ಯರ ಮೇಲಿನ ಹಲ್ಲೆ ಖಂಡಿಸಿ 119 ವೈದ್ಯರ ರಾಜೀನಾಮೆ

ಏಜೆನ್ಸೀಸ್
Published 14 ಜೂನ್ 2019, 13:35 IST
Last Updated 14 ಜೂನ್ 2019, 13:35 IST
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಅಗರ್ತಾಲದಲ್ಲಿ ವೈದ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಚಿತ್ರ: ರಾಯಿಟರ್ಸ್‌
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಅಗರ್ತಾಲದಲ್ಲಿ ವೈದ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಚಿತ್ರ: ರಾಯಿಟರ್ಸ್‌   

ಕೋಲ್ಕತ್ತ:ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಾವಿಗೀಡಾದ ರೋಗಿಯೊಬ್ಬರ ಸಂಬಂಧಿಕರು ನಡೆಸಿದ ವೈದ್ಯರ ಮೇಲೆ ನಡೆಸಿದ ಹಲ್ಲೆ ಖಂಡಿಸಿ 119 ವೈದ್ಯರು ರಾಜೀನಾಮೆ ಸಲ್ಲಿಸಿದ್ದಾರೆ.

ಡಾರ್ಜಿಲಿಂಗ್‌ನ ಉತ್ತರ ಬಂಗಾಳವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 119 ವೈದ್ಯರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಎಎನ್‌ಐ ಟ್ವೀಟ್‌ ಮಾಡಿದೆ.

ಇತ್ತ ಪಶ್ಚಿಮ ಬಂಗಾಳದಲ್ಲಿ ಮುಷ್ಕರ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಬೆಂಬಲ ಸೂಚಿಸಿ, ಮಹಾರಾಷ್ಟ್ರ, ದೆಹಲಿ, ಹೈದರಾಬಾದ್‌ನ ಏಮ್ಸ್‌ ಆಸ್ಪತ್ರೆ ವೈದ್ಯರು ಮುಷ್ಕರ ನಡೆಸುತ್ತಿರುವುದರಿಂದ ಚಿಕಿತ್ಸೆ ಇಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ.

ADVERTISEMENT

ಭದ್ರತೆಗೆ ಸಂಬಂಧಿಸಿದ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಸಲಾಗುವುದು ಎಂದು ಕಿರಿಯ ವೈದ್ಯರು ಪಟ್ಟು ಹಿಡಿದು ಮುಷ್ಕರವನ್ನು ಮುಂದುವರೆಸಿದ್ದಾರೆ.

ಕೋಲ್ಕತ್ತದ ಎನ್‌ಆರ್‌ಎಸ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಾವಿಗೀಡಾದ ರೋಗಿಯೊಬ್ಬರ ಸಂಬಂಧಿಕರು ನಡೆಸಿದ ಹಲ್ಲೆ ಯಲ್ಲಿ ಇಬ್ಬರು ವೈದ್ಯರು ತೀವ್ರ ಗಾಯಗೊಂಡಿದ್ದರು. ಈ ಘಟನೆ ಬಳಿಕ, ಮಂಗಳವಾರದಿಂದ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.