ADVERTISEMENT

ಕೋವಿಡ್ ಹೆಚ್ಚಳ: ಪಶ್ಚಿಮ ಬಂಗಾಳದಲ್ಲಿ ಶಾಲೆ, ಕಾಲೇಜು, ಸಿನಿಮಾ ಹಾಲ್, ಸಲೂನ್ ಬಂದ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಜನವರಿ 2022, 10:31 IST
Last Updated 2 ಜನವರಿ 2022, 10:31 IST
ಮಮತಾ ಬ್ಯಾನರ್ಜಿ, ಚಿತ್ರ–ಪಿಟಿಐ
ಮಮತಾ ಬ್ಯಾನರ್ಜಿ, ಚಿತ್ರ–ಪಿಟಿಐ   

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ಹಾಗೂ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ನಿಟ್ಟಿನಲ್ಲಿ ನಾಳೆಯಿಂದ ಶಾಲೆ, ಕಾಲೇಜು, ಸಿನಿಮಾ ಮಂದಿರ, ಮನರಂಜನಾ ತಾಣ, ಸಲೂನ್, ಸ್ಪಾಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ.

ಅಲ್ಲದೇ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಶೇ 50 ರಷ್ಟು ಪ್ರಮಾಣದಲ್ಲಿ ನೌಕರರೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಲ್ಲಿನ ಸರ್ಕಾರ ಆದೇಶಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟಿಸಿದೆ. ಈ ಮೂಲಕ ಕೊರೊನಾ ಮೂರಲೇ ಅಲೆಯ ಹಿನ್ನೆಲೆಯಲ್ಲಿ ಭಾಗಶಃ ಲಾಕ್‌ಡೌನ್‌ನ್ನು ಪಶ್ಚಿಮ ಬಂಗಾಳದಲ್ಲಿ ಘೋಷಿಸಿದಂತಾಗಿದೆ.

ಕೋಲ್ಕತ್ತ ಸೇರಿದಂತೆ ರಾಜ್ಯದಲ್ಲಿ ಸೋಂಕು ಒಂದೇ ವಾರದಲ್ಲಿ ನಾಲ್ಕು ಪಟ್ಟು ಹೆಚ್ಚಳ ಕಂಡಿದೆ. ವಾರದ ಪಾಸಿಟಿವಿಟಿ ದರ ಶೇ 12.56 ಕ್ಕೆ ಹೆಚ್ಚಳಗೊಂಡಿದೆ. ಇಲ್ಲಿಯವರೆಗೆ ಆ ರಾಜ್ಯದಲ್ಲಿ 19,000ಕ್ಕೂ ಹೆಚ್ಚು ಜನ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ.

ADVERTISEMENT

ಇನ್ನೊಂದೆಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಎಲ್ಲ ಸಾರ್ವಜನಿಕ ಸಮಾವೇಶಗಳನ್ನು ಮುಂದೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.