ADVERTISEMENT

ಪಶ್ಚಿಮ ಬಂಗಾಳ ವಿಧಾನಸಭೆ: ಬಿಜೆಪಿಯ ಸುವೆಂದು ಅಧಿಕಾರಿ ವಿಪಕ್ಷ ನಾಯಕ

​ಪ್ರಜಾವಾಣಿ ವಾರ್ತೆ
Published 10 ಮೇ 2021, 11:59 IST
Last Updated 10 ಮೇ 2021, 11:59 IST
ಸುವೆಂದು ಅಧಿಕಾರಿ
ಸುವೆಂದು ಅಧಿಕಾರಿ   

ಕೋಲ್ಕತ್ತ: ಪಶ್ಚಿಮ ಬಂಗಾಳದ ಹೊಸ ವಿಧಾನಸಭೆಗೆ ಬಿಜೆಪಿಯು ವಿರೋಧ ಪಕ್ಷದ ನಾಯಕನಾಗಿ ಸುವೆಂದು ಅಧಿಕಾರಿ ಅವರನ್ನು ಆಯ್ಕೆ ಮಾಡಿದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೆಂದು ಅವರ ಹೆಸರನ್ನು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಪ್ರಕಟಿಸಿದರು.

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆಪ್ತ ವಲಯದಲ್ಲಿ ಸ್ಥಾನ ಪಡೆದಿದ್ದ ಸುವೆಂದು, ನಂದಿಗ್ರಾಮ ಕ್ಷೇತ್ರದಿಂದ ಮಮತಾ ವಿರುದ್ಧ 1,900 ಮತಗಳ ಅಂತರದ ಗೆಲುವು ಸಾಧಿಸಿದರು.

ADVERTISEMENT

ಸಂಪುಟ ದರ್ಜೆ ಸಚಿವರಾಗಿದ್ದ ಸುವೆಂದು ಅಧಿಕಾರಿ, ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಇದೀಗ ವಿಧಾನಸಭೆಯಲ್ಲಿ ಮಮತಾ ಮತ್ತು ಸುವೆಂದು ಮುಖಾಮುಖಿಯಾಗಲಿದ್ದಾರೆ.

294 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 213 ಸ್ಥಾನಗಳಲ್ಲಿ ಆಡಳಿತಾರೂಢ ಟಿಎಂಸಿ ಗೆಲುವು ಪಡೆದಿದೆ. ಬಿಜೆಪಿ 77 ಸ್ಥಾನಗಳನ್ನು ಪಡೆದು ವಿರೋಧ ಪಕ್ಷವಾಗಿ ರೂಪುಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.