ಕೋಲ್ಕತ್ತ: ದೇಶದ ಪಶ್ಚಿಮ ಗಡಿಯುದ್ದಕ್ಕೂ ಭಯೋತ್ಪಾದಕ ಕೇಂದ್ರಗಳ ಮೇಲೆ ನಿಖರ ದಾಳಿ ನಡೆಸಿದ ಭಾರತೀಯ ಸೇನಾಪಡೆಗಳ ಶೌರ್ಯವನ್ನು ಶ್ಲಾಘಿಸುವ ನಿರ್ಣಯವನ್ನು ಪಶ್ಚಿಮ ಬಂಗಾಳ ವಿಧಾನಸಭೆ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿತು.
ಈ ನಿರ್ಣಯದಲ್ಲಿ ‘ಆಪರೇಷನ್ ಸಿಂಧೂರ’ ಎಂಬ ಪದದ ಉಲ್ಲೇಖವಿಲ್ಲ. ರಾಷ್ಟ್ರದ ಭದ್ರತೆಯನ್ನು ಕಾಪಾಡುವಲ್ಲಿ ಸಶಸ್ತ್ರ ಪಡೆಗಳ ಅಚಲ ಧೈರ್ಯವನ್ನು ಶ್ಲಾಘಿಸುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಲಾಯಿತು.
ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರದ ವೈಫಲ್ಯದಿಂದಲೇ 26 ಜೀವಗಳ ಹಾನಿಯಾಯಿತು ಎಂದು ದೂರಿದರು.
ಬ್ಯಾನರ್ಜಿ ಹೇಳಿಕೆಗೆ ವಿರೋಧ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಷ್ಟ್ರೀಯ ದುರಂತವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸುವೇಂದು ಅಧಿಕಾರಿ ಹರಿಹಾಯ್ದರು.
ಟಿಎಂಸಿ– ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.