ADVERTISEMENT

ಪಶ್ಚಿಮ ಬಂಗಾಳ: 77 ಸ್ಥಾನಗಳಲ್ಲಿ ಕಾಂಗ್ರೆಸ್‌, ಎಡ ಪಕ್ಷ ಸ್ಪರ್ಧೆ

ಪಿಟಿಐ
Published 25 ಜನವರಿ 2021, 16:27 IST
Last Updated 25 ಜನವರಿ 2021, 16:27 IST

ಕೋಲ್ಕತ್ತ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ 77 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಮತ್ತು ಎಡಪಕ್ಷಗಳು ನಿರ್ಧರಿಸಿವೆ.

ಸೋಮವಾರ ರೂಪಿಸಿರುವ ಸೂತ್ರದ ಅನ್ವಯ 2016ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಈ ಪಕ್ಷಗಳು ತಿಳಿಸಿವೆ.

2016ರ ಚುನಾವಣೆಯಲ್ಲಿ ಎಡಪಕ್ಷ ಮತ್ತು ಕಾಂಗ್ರೆಸ್‌ ಮೈತ್ರಿ 77 ಸ್ಥಾನಗಳಲ್ಲಿ ಗೆದ್ದಿದ್ದವು. ಇದರಲ್ಲಿ ಕಾಂಗ್ರೆಸ್‌ 44 ಸ್ಥಾನಗಳಲ್ಲಿ ಜಯಗಳಿಸಿತ್ತು.

ADVERTISEMENT

‘44 ಸ್ಥಾನಗಳಲ್ಲಿ ಕಾಂಗ್ರೆಸ್‌ ಹಾಗೂ 33 ಸ್ಥಾನಗಳಲ್ಲಿ ಎಡಪಕ್ಷಗಳು ಸ್ಪರ್ಧಿಸಲಿವೆ. ಉಳಿದ 217 ಸ್ಥಾನಗಳ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ತಿಂಗಳ ಅಂತ್ಯಕ್ಕೆ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಕಾಂಗ್ರೆಸ್‌ ನಾಯಕ ಪ್ರದೀಪ್‌ ಭಟ್ಟಾಚಾರ್ಯ ತಿಳಿಸಿದರು.

294 ಸ್ಥಾನಗಳ ವಿಧಾನಸಭೆ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.