ADVERTISEMENT

ಪಶ್ಚಿಮ ಬಂಗಾಳ: ಜನ್ಮದಿನದ ಪಾರ್ಟಿ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಏಜೆನ್ಸೀಸ್
Published 7 ಸೆಪ್ಟೆಂಬರ್ 2025, 11:07 IST
Last Updated 7 ಸೆಪ್ಟೆಂಬರ್ 2025, 11:07 IST
<div class="paragraphs"><p>ಸಾಮೂಹಿಕ ಅತ್ಯಾಚಾರ</p></div>

ಸಾಮೂಹಿಕ ಅತ್ಯಾಚಾರ

   

ಕೊಲ್ಕತ್ತಾ: ಜನ್ಮದಿನದ ಪಾರ್ಟಿ ನೆಪದಲ್ಲಿ 20 ವರ್ಷದ ಯುವತಿ ಮೇಲೆ ಪರಿಚಿತ ಯುವಕರಿಬ್ಬರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಇಲ್ಲಿನ ದಕ್ಷಿಣ ಹೊರವಲಯದ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತ ಯುವಕರು ನಾಪತ್ತೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ಈ ಕೃತ್ಯ ಎಸಗಿದ ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ಇವರಲ್ಲಿ ದೀಪ್ ಸರ್ಕಾರಿ ನೌಕರ ಎಂಬುದು ತಿಳಿದುಬಂದಿದೆ.

ಜನ್ಮದಿನ ಆಚರಿಸುವ ನೆಪದಲ್ಲಿ ಚಂದನ್ ಶುಕ್ರವಾರ ಸಂಜೆ ನನ್ನ ದೀಪ್ ಮನೆಗೆ ಕರೆದೊಯ್ದಿದ್ದ. ಅಲ್ಲಿ ಕೇಕ್‌ ಕಟ್‌ ಮಾಡಿ ಊಟ ಮಾಡಿದ ಬಳಿಕ ರಾತ್ರಿ 10 ಗಂಟೆ ಸುಮಾರಿಗೆ ನಾನು ಮನೆಗೆ ಹೊರಡುವಾಗ ಅವರು ನನ್ನ ತಡೆದು ಅತ್ಯಾಚಾರ ಮಾಡಿದರು. ನಾನು ಶನಿವಾರ ಬೆಳಗ್ಗೆ ಅಲ್ಲಿಂದ ತಪ್ಪಿಸಿಕೊಂಡು ಬಂದು ಮನೆಯವರಿಗೆ ವಿಷಯ ತಿಳಿಸಿದೆ ಎಂದು ಹರಿದೇವಪುರದ ನಿವಾಸಿಯಾಗಿರುವ ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವತಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ, ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗಾಗಿ ಪೊಲೀಸರು ವಿವಿಧ ತಂಡಗಳನ್ನು ರಚಿಸಿ ತನಿಖೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.