ADVERTISEMENT

ಪಶ್ಚಿಮ ಬಂಗಾಳ | ಬಾಂಬ್ ಸ್ಫೋಟ; ವ್ಯಕ್ತಿ ಸಾವು, ಮತ್ತೊಬ್ಬರಿಗೆ ಗಾಯ

ಪಿಟಿಐ
Published 5 ಜುಲೈ 2025, 6:40 IST
Last Updated 5 ಜುಲೈ 2025, 6:40 IST
<div class="paragraphs"><p>ಸ್ಫೋಟ</p></div>

ಸ್ಫೋಟ

   

(ಐಸ್ಟೋಕ್ ಚಿತ್ರ)

ಕೋಲ್ಕತ್ತ: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ADVERTISEMENT

ರಾಜೋವಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದೆ.

ಮೃತನನ್ನು ತುಫಾನ್ ಚೌಧರಿ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಸಮಾಜ ವಿರೋಧಿಯೊಬ್ಬರು ಪಾಳುಬಿದ್ದ ಮನೆಯೊಳಗೆ ಕಚ್ಚಾ ಬಾಂಬ್‌ಗಳನ್ನು ತಯಾರಿಸಲು ದುಷ್ಕರ್ಮಿಗಳ ಗುಂಪನ್ನು ಕರೆತಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸ್ಫೋಟದ ತೀವ್ರತೆಯಿಂದ ಹತ್ತಿರದ ಮನೆಗಳ ಬಾಗಿಲು ಮತ್ತು ಕಿಟಕಿಗಳು ನಡುಗಿದ್ದವು ಎಂದು ಸ್ಥಳೀಯರೊಬ್ಬರು ಆತಂಕ ವ್ಯಕ್ತಪಡಿಸಿದರು.

ಮನೆಯನ್ನು ಬಾಂಬ್ ತಯಾರಿಸುವ ಕೇಂದ್ರವಾಗಿ ಅಥವಾ ಇತರೆ ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆಯೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.