ADVERTISEMENT

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಮಮತಾರಿಂದ ಗಾಲಿಕುರ್ಚಿ ಪಾದಯಾತ್ರೆ!

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 10:27 IST
Last Updated 29 ಮಾರ್ಚ್ 2021, 10:27 IST
ಮಮತಾ ಬ್ಯಾನರ್ಜಿ (ಪಿಟಿಐ ಸಂಗ್ರಹ ಚಿತ್ರ)
ಮಮತಾ ಬ್ಯಾನರ್ಜಿ (ಪಿಟಿಐ ಸಂಗ್ರಹ ಚಿತ್ರ)   

ನಂದಿಗ್ರಾಮ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಠಾಕೂರ್ ಚೌಕ್‌ನಲ್ಲಿ ಸೋಮವಾರ ಪಾದಯಾತ್ರೆ ನಡೆಸಿದ್ದಾರೆ.

ಗಾಲಿ ಕುರ್ಚಿಯಲ್ಲಿ ಕುಳಿತುಕೊಂಡು ಬೆಂಬಲಿಗರ ಜತೆ ಮಮತಾ ಪಾದಯಾತ್ರೆಯಲ್ಲಿ ಭಾಗವಹಿಸಿದ ವಿಡಿಯೊವನ್ನು ‘ಎಎನ್‌ಐ’ ಟ್ವೀಟ್ ಮಾಡಿದೆ.

ಮಾರ್ಚ್ 10ರಂದು ನಾಮಪತ್ರ ಸಲ್ಲಿಸಿ ಹಿಂತಿರುಗುವ ಸಂದರ್ಭ ಅಪರಿಚಿತರು ತಳ್ಳಿದ್ದರಿಂದ ಮಮತಾ ಕಾಲಿಗೆ ಗಾಯವಾಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ಬಿಡುಗಡೆಯಾಗಿದ್ದರು.

ADVERTISEMENT

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 1ರಂದು ನಡೆಯಲಿದೆ. ಇದರಲ್ಲಿ ನಂದಿಗ್ರಾಮ ಕ್ಷೇತ್ರವೂ ಸೇರಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿ ಆ ಪಕ್ಷದಿಂದ ಕಣಕ್ಕಿಳಿದಿರುವ ಸುವೇಂದು ಅಧಿಕಾರಿ ಅವರು ನಂದಿಗ್ರಾಮದಲ್ಲಿ ಮಮತಾ ಪ್ರತಿಸ್ಪರ್ಧಿಯಾಗಿದ್ದಾರೆ. ಸುವೇಂದು ಅಧಿಕಾರಿ ಅವರ ಹಾಲಿ ಕ್ಷೇತ್ರವೂ ಆಗಿದೆ ನಂದಿಗ್ರಾಮ. ಹೀಗಾಗಿ ಎರಡೂ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.