ADVERTISEMENT

ಹೆಲಿಕಾಪ್ಟರ್ ಹತ್ತುವಾಗ ಕಾಲುಜಾರಿ ಬಿದ್ದ CM ಮಮತಾ ಬ್ಯಾನರ್ಜಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಏಪ್ರಿಲ್ 2024, 9:27 IST
Last Updated 27 ಏಪ್ರಿಲ್ 2024, 9:27 IST
<div class="paragraphs"><p>ಹೆಲಿಕಾಪ್ಟರ್ ಹತ್ತುವಾಗ ಕಾಲುಜಾರಿ ಬಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ</p></div>

ಹೆಲಿಕಾಪ್ಟರ್ ಹತ್ತುವಾಗ ಕಾಲುಜಾರಿ ಬಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

   

(ಚಿತ್ರ ಕೃಪೆ–@ANI)

ದುರ್ಗಾಪುರ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ವರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ. ಈ ವಿಡಿಯೊವನ್ನು ಎಎನ್ಐ ಸುದ್ದಿಸಂಸ್ಥೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ADVERTISEMENT

ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಅವರು ಕಾಲು ಜಾರಿ ಬಿದ್ದಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ತಕ್ಷಣ ರಕ್ಷಣಾ ಸಿಬ್ಬಂದಿ ಅವರ ಬಳಿ ಧಾವಿಸಿದ್ದಾರೆ. ಬಳಿಕ ಸಿಎಂ ಮಮತಾ ಬ್ಯಾನರ್ಜಿ ‌ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.