ADVERTISEMENT

ಆ್ಯಪ್ ನಿಷೇಧವಷ್ಟೇ ಸಾಲದು, ಚೀನಾಕ್ಕೆ ತಕ್ಕ ಉತ್ತರ ನೀಡಬೇಕು: ಮಮತಾ ಬ್ಯಾನರ್ಜಿ

ಪಿಟಿಐ
Published 30 ಜೂನ್ 2020, 13:41 IST
Last Updated 30 ಜೂನ್ 2020, 13:41 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಆ್ಯಪ್‌ಗಳನ್ನು ನಿಷೇಧಿಸಿದರಷ್ಟೇ ಸಾಲದು, ಚೀನಾಕ್ಕೆ ತಕ್ಕ ಉತ್ತರ ನೀಡಬೇಕಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಆದಾಗ್ಯೂ, ಏನು ಮಾಡಬೇಕೆಂಬ ನಿರ್ಧಾರವನ್ನು ಕೇಂದ್ರ ಸರ್ಕಾವೇ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

‘ಇದು ವಿದೇಶಾಂಗ ವ್ಯವಹಾರಗಳಿಗೆ ಸಂಬಂಧಿಸಿದ ವಿಷಯ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ನಾವು ಬೆಂಬಲಿಸುತ್ತೇವೆ. ಆದರೆ, ಒಂದೆಡೆ ನಾವು ಆಕ್ರಮಣಕಾರಿಯಾಗಿರಬೇಕು. ಮತ್ತೊಂದೆಡೆ, ರಾಜತಾಂತ್ರಿಕ ವ್ಯವಹಾರದ ಮೂಲಕ ಪ್ರಯತ್ನಿಸಬೇಕು’ ಎಂದು ಅವರು ಹೇಳಿದ್ದಾರೆ.

ADVERTISEMENT

‘ಕೆಲವು ಆ್ಯಪ್‌ಗಳನ್ನು ನಿಷೇಧಿಸುವುದು ತಕ್ಕ ಉತ್ತರ ನೀಡಿದಂತಾಗುವುದಿಲ್ಲ. ನಾವು ಸರಿಯಾದ ತಿರುಗೇಟು ನೀಡಬೇಕಿದೆ’ ಎಂದು ಅವರು ಹೇಳಿದ್ದಾರೆ.

ಚೀನಾದ ಟಿಕ್‌ಟಾಕ್, ಶೇರ್‌ಇಟ್, ಹೆಲೊ, ಲೀಕೀ, ಯುಸಿ ಬ್ರೌಸರ್‌‌ ಮತ್ತು ವಿ–ಚಾಟ್ ಸೇರಿದಂತೆ 59 ಮೊಬೈಲ್‌ ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ಸೋಮವಾರ ನಿಷೇಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.