ADVERTISEMENT

ಪಶ್ಚಿಮ ಬಂಗಾಳ | ಅತ್ಯಾಚಾರ, ಕೊಲೆ; ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪಿಟಿಐ
Published 19 ಜುಲೈ 2020, 19:45 IST
Last Updated 19 ಜುಲೈ 2020, 19:45 IST

ರಾಯ್‌ಗಂಜ್‌: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಉದ್ರಿಕ್ತರ ಗುಂಪೊಂದು ಭಾನುವಾರ ಇಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು.

ರಾಷ್ಟ್ರೀಯ ಹೆದ್ದಾರಿ– 31 ತಡೆದ ಪ್ರತಿಭಟನಾಕಾರರು ತಲಾ ಮೂರು ಸರ್ಕಾರಿ ಬಸ್‌ ಹಾಗೂ ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗಳನ್ನು ಶೀಘ್ರವೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

‘ಸಿಲಿಗುರಿ ಸಮೀಪದ ಸೋನಾಪುರ ಗ್ರಾಮದಲ್ಲಿ ವಾಸವಿದ್ದ ಬಾಲಕಿ ಭಾನುವಾರ ಬೆಳಿಗ್ಗೆ ಬಹಿರ್ದೆಸೆಗೆಂದು ಮನೆಯಿಂದ ಹೊರಗೆ ಹೋಗಿದ್ದಳು. ಕೆಲವು ಗಂಟೆಗಳ ಬಳಿಕ ಆಕೆಯ ಮೃತದೇಹ ಪತ್ತೆಯಾಗಿತ್ತು.ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಸ್ಥಳಕ್ಕೆ ತೆರಳಿದ್ದ ಪೊಲೀಸರ ಮೇಲೆಯೂ ಆಕ್ರೋಶ ವ್ಯಕ್ತಪಡಿಸಿದ್ದರು. ಕ್ಷಿಪ್ರ ಕ್ರಿಯಾ ಪಡೆಯ ನೆರವಿನಿಂದ ಗಲಭೆಯನ್ನು ನಿಯಂತ್ರಿಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.