ಸಿಪಿಐ(ಎಂ)
ಕೋಲ್ಕತ್ತ: ಪಶ್ಚಿಮ ಬಂಗಾಳವು ಅಪರಾಧಿಗಳಿಗೆ ಸುರಕ್ಷಿತ ಸ್ಥಳವಾಗಿದೆಯೇ ಹೊರತು ಮಹಿಳೆಯರಿಗೆ ಅಲ್ಲ ಎಂದು ಸಿಪಿಐ(ಎಂ) ಪಕ್ಷ ಭಾನುವಾರ ಕಿಡಿಕಾರಿದೆ.
ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳಾ ವಿದ್ಯಾರ್ಥಿಗಳು, ವಿಶೇಷವಾಗಿ ರಾಜ್ಯದ ಹೊರಗಿನವರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಹೇಳಿಕೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ, ಮುಖ್ಯಮಂತ್ರಿ ಬ್ಯಾನರ್ಜಿ ಅವರೇ ತಡರಾತ್ರಿ ವೇಳೆ ಮಹಿಳೆಯರು ಹೊರಗೆ ಓಡಾಡಬೇಡಿ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬ ಸಂದೇಶ ನೀಡಿದ್ದಾರೆ.
ರಾಜ್ಯವು ಮಹಿಳೆಯರಿಗೆ ಇನ್ನು ಮುಂದೆ ಸುರಕ್ಷಿತವಾಗಿಲ್ಲ ಎಂಬುವುದಾಗಿ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ ಎಂದು ಚಕ್ರವರ್ತಿ ಹೇಳಿದ್ದಾರೆ.
ಖಾಸಗಿ ವೈದ್ಯಕೀಯ ಕಾಲೇಜಿನ ಭದ್ರತಾ ಸಿಬ್ಬಂದಿಯು ಕ್ಯಾಂಪಸ್ ಒಳಗಿನ ಭದ್ರತೆಗೆ ಜವಾಬ್ದಾರರು. ಹೊರಗೆ ಆಗುವ ಘಟನೆಗಳಲ್ಲ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಹದಗೆಟ್ಟಿದೆ ಎಂದು ಚಕ್ರವರ್ತಿ ಟೀಕಿಸಿದ್ದಾರೆ.
ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.
ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.