
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನುಸುಳುಕೋರರಿಗೆ ಆಶ್ರಯ ನೀಡುತ್ತಿರುವ ಮಮತಾ ಬ್ಯಾನರ್ಜಿ ಸರ್ಕಾರ ಮುಂಬರುವ ಚುನಾವಣೆಯಲ್ಲಿ ಪತನಗೊಳ್ಳುವುದು ಖಚಿತ ಎಂದು ಕೇಂದ್ರ ಗೃಹ ಸಚಿವ ಹೇಳಿದ್ದಾರೆ.
ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಅಮಿತ್ ಶಾ ಅವರು ರಾಜ್ಯಕ್ಕೆ 2 ದಿನ ಪ್ರವಾಸ ಕೈಗೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಇಂದು ಭಾಗಿ ಆಗಿ ಮಾತನಾಡಿದ ಅವರು, ಸಂಸತ್ತಿನಲ್ಲಿ 'ವಂದೇ ಮಾತರಂ' ಮೇಲಿನ ಚರ್ಚೆಗೆ ಟಿಎಂಸಿ ಆಕ್ಷೇಪ ವ್ಯಕ್ತಪಡಿಸುವುದು ಬಂಗಾಳದ 'ಅಸ್ಮಿತೆ'ಯನ್ನು ವಿರೋಧಿಸಿದಂತೆ ಎಂದು ಕಿಡಿಕಾರಿದ್ದಾರೆ.
ಕೋಲ್ಕತ್ತದ ಆನಂದಪುರದಲ್ಲಿ ನಡೆದ ಅಗ್ನಿ ದುರಂತ ಅಪಘಾತವಲ್ಲ, ಟಿಎಂಸಿ ಸರ್ಕಾರದ ಭ್ರಷ್ಟಾಚಾರದ ಪರಿಣಾಮ ಎಂದು ಆರೋಪಿಸಿದ್ದಾರೆ.
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶೇ 50ಕ್ಕೂ ಹೆಚ್ಚು ಮತಗಳನ್ನು ಗಳಿಸಲಿದೆ, ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.