ADVERTISEMENT

ಪಶ್ಚಿಮ ಬಂಗಾಳ: ಭವಾನಿಪುರ ಸೇರಿ 3 ಕ್ಷೇತ್ರಗಳಿಗೆ ಸೆ. 30ರಂದು ಉಪಚುನಾವಣೆ ಘೋಷಣೆ

ಒಡಿಶಾದ ಪಿಪ್ಲಿ ಕ್ಷೇತ್ರಕ್ಕೂ ಉಪಚುನಾವಣೆ * ಅ. 3ರಂದು ಮತ ಎಣಿಕೆ

ಪಿಟಿಐ
Published 4 ಸೆಪ್ಟೆಂಬರ್ 2021, 10:41 IST
Last Updated 4 ಸೆಪ್ಟೆಂಬರ್ 2021, 10:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಲಿರುವ ಭವಾನಿಪುರ ಕ್ಷೇತ್ರ ಸೇರಿದಂತೆ ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಸೆ. 30ರಂದು ಉಪಚುನಾವಣೆ ಘೋಷಿಸಲಾಗಿದೆ.

ಅಕ್ಟೋಬರ್‌ 3ರಂದು ಮತ ಎಣಿಕೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.

ಪಶ್ಚಿಮ ಬಂಗಾಳದ ಶಂಷೇರ್‌ಗಂಜ್‌ ಹಾಗೂ ಜಾಂಗೀರಪುರ, ಒಡಿಶಾದ ಪಿಪ್ಲಿ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದೆ.

ADVERTISEMENT

ಇತ್ತೀಚೆಗೆ ನಡೆದ ಚುನಾವಣೆ ವೇಳೆ, ತಮ್ಮ ಸಾಂಪ್ರದಾಯಿಕ ಕ್ಷೇತ್ರ ಭವಾನಿಪುರ ತೊರೆದು, ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಪರಾಭವಗೊಂಡರು.

ಟಿಎಂಸಿಗೆ ಭಾರಿ ಬಹುಮತ ಲಭಿಸಿದ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮಮತಾ ಬ್ಯಾನರ್ಜಿ ಅವರು ಈ ಉಪಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.