
ಪಿಟಿಐ
ಎಸ್‌ಐಆರ್ ಪ್ರಕಿಯೆ
ಕೃಪೆ: ಪಿಟಿಐ
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಮಾನ್ಯತೆ ಪಡೆದ ದಾಖಲೆಯಾಗಿ 10ನೇ ತರಗತಿಯ ಪ್ರವೇಶ ಪತ್ರವನ್ನು ಪರಿಗಣಿಸುವ ಪ್ರಸ್ತಾವವನ್ನು ಪಶ್ಚಿಮ ಬಂಗಾಳ ಮುಖ್ಯ ಚುನಾವಣಾ ಆಯುಕ್ತರು ತಿರಸ್ಕರಿಸಿದ್ದಾರೆ.
ಮಾಧ್ಯಮಿಕ ಪ್ರವೇಶಪಟ್ಟಿಯನ್ನು ಪರಿಗಣಿಸುವಂತೆ ಕೋರಿದ್ದ ಪ್ರಸ್ತಾವವನ್ನು ಆಯೋಗವು ಪರಿಶೀಲಿಸಿದ್ದು ಎಸ್‌ಐಆರ್‌ನ ಸ್ವೀಕರಾರ್ಹ ದಾಖಲೆಗಳ ಪಟ್ಟಿಯಲ್ಲಿ ಇಲ್ಲ’ ಎಂದು ಆಯುಕ್ತರ ಪರವಾಗಿ ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ಆಯೋಗವು ಸ್ಪಷ್ಟಪಡಿಸಿದೆ.
ಈ ವಿಚಾರವನ್ನು ರಾಜ್ಯ ಸರ್ಕಾರ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.