ಕೋಲ್ಕತ್ತ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ‘ಪ್ರವಾಸಿ ರಾಜಕಾರಣಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೇವಡಿ ಮಾಡಿದ್ದಾರೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕನನ್ನು ಟೀಕಿಸಿದ್ದು ಮಾತ್ರವಲ್ಲದೆ, ಬಿಜೆಪಿಯ ಅಭಿವೃದ್ಧಿ ಅಜೆಂಡಾ, ರಾಷ್ಟ್ರೀಯತೆ ಮತ್ತು ಆತ್ಮ ನಿರ್ಭರ ಭಾರತ ಅಭಿಯಾನಗಳ ಬಗ್ಗೆ ಮಾತನಾಡಿದ್ದಾರೆ.
ರಾಹುಲ್ ಗಾಂಧಿಯವರು ಮೊದಲು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಿರಲಿಲ್ಲ. ತಮಿಳುನಾಡು, ಕೇರಳ, ಪುದುಚೇರಿ, ಅಸ್ಸಾಂಗಳಲ್ಲಿ ಮಾತ್ರವೇ ಪ್ರಚಾರ ನಡೆಸಿದ್ದರು. ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ಮುಕ್ತಾಯವಾದ ಬಳಿಕ ಪ್ರಚಾರಕ್ಕೆ ಬಂದಿದ್ದಾರೆ.
ಮಮತಾ ವಿರುದ್ಧವೂ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿಯವರು ಹಣಕಾಸು ಅಭಿವೃದ್ಧಿ ಬಯಸಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನುಸುಳುಕೋರರಿಗೆ ನೆರವಾಗಲು ಬಯಸುತ್ತಿದ್ದಾರೆ. ಈಗ ಯಾವ ರೀತಿಯ ಸರ್ಕಾರ ಬೇಕೆಂದು ನೀವೇ ನಿರ್ಧರಿಸಿ ಎಂದು ಶಾ ಹೇಳಿದ್ದಾರೆ.
ಮೋದಿಯವರ ‘ಬಂಗಾರದ ಬಂಗಾಳ (ಸೋನಾರ್ ಬಂಗಾಳ)’ ಬೇಕೇ ಅಥವಾ ನುಸುಳುಕೋರರಿಗೆ ಸಹಾಯ ಮಾಡುವ ದೀದಿ ಅವರ ಬಂಗಾಳ ಬೇಕೇ ಎಂಬುದನ್ನು ನೀವೇ ನಿರ್ಧರಿಸಿ ಎಂದು ಮತದಾರರನ್ನು ಉದ್ದೇಶಿಸಿ ಅವರು ಹೇಳಿದ್ದಾರೆ.
ಮೇ 2ರಂದು ನೀವು ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಳಿಕ ಗಡಿ ನುಸುಳಿ ಬರಲು ಯಾರಿಗೂ ಅವಕಾಶ ಇರುವುದಿಲ್ಲ ಎಂದು ಈ ಮೂಲಕ ಭರವಸೆ ನೀಡುತ್ತೇನೆ ಎಂಬುದಾಗಿಯೂ ಶಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.