
ಕೋಲ್ಕತ್ತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯ ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಲ್ಕತ್ತದ ಹೊರವಲಯದಲ್ಲಿರುವ ನರೇಂದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಜೀರಾಬಾದ್‌ನಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ. ಏಳು ಗಂಟೆಗಳ ನಿರಂತರ ಕಾರ್ಯಾಚರಣೆ ನಂತರ ಬೆಂಕಿಯನ್ನು ನಂದಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆ ಏಳು ಮಂದಿಯ ಸುಟ್ಟ ಮೃತದೇಹಗಳು ಪತ್ತೆಯಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಹೋಗಿರುವುದರಿಂದ ಮೃತರ ಗುರುತು ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತರು ಹಾಗೂ ಕಾಣೆಯಾದವರೆಲ್ಲರೂ ಪೂರ್ವ ಮೇದಿನಿಪುರ, ಪಶ್ಚಿಮ ಮೇದಿನಿಪುರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಯವರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ ಇಂತಹ ಅಗ್ನಿ ದುರಂತ ವೇಳೆ ವಿಪತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದೆ ಎಂದೂ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.