ಕೋಲ್ಕತ್ತ: ಬಾಂಗ್ಲಾದೇಶದ ಜಲಗಡಿಯನ್ನು ಅತಿಕ್ರಮ ಪ್ರವೇಶ ಮಾಡಿದ ಅರೋಪದ ಮೇಲೆ ಪಶ್ಚಿಮ ಬಂಗಾಳದ 34 ಮೀನುಗಾರರನ್ನು ವಶಕ್ಕೆ ಪಡೆದಿರುವುದಾಗಿ ಬಾಂಗ್ಲಾ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಜುಲೈ 13ರಂದು ನಮ್ಖಾನ ಬಳಿಯ ಸಮುದ್ರ ತೀರದಿಂದ ಎರಡು ದೋಣಿಗಳಲ್ಲಿ ಸಮುದ್ರಕ್ಕೆ ತೆರಳಿದ್ದ ಮೀನುಗಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ದಕ್ಷಿಣ 24 ಪರಗಣ ಜಿಲ್ಲೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದಿದ್ದಾರೆ.
ಬಂಗಾಳಕೊಲ್ಲಿಯ ಜಲಗಡಿಯಲ್ಲಿ ಎರಡೂ ದೇಶಗಳ ಮೀನುಗಾರರು ಕೂಡ ಜೊತೆಯಲ್ಲೇ ಮೀನು ಹಿಡಿಯುತ್ತಾರೆ. ಬಾಂಗ್ಲಾದ ವಶದಲ್ಲಿರುವ ಮೀನುಗಾರರನ್ನು ಮರಳಿ ಕರೆತರುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಭಾರತೀಯ ಅಧಿಕಾರಿಗಳು ಹೇಳಿದ್ದಾರೆ.
ಆದರೆ, ಈ ಕುರಿತು ಯಾವುದೇ ಮಾಹಿತಿಯು ಲಭ್ಯವಾಗಿಲ್ಲ ಎಂದು ರಕ್ಷಣಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.