ADVERTISEMENT

ಪಶ್ಚಿಮ ಬಂಗಾಳದಲ್ಲಿ ಪ್ರವಾಹ ಪರಿಸ್ಥಿತಿ ಮಾನವ ನಿರ್ಮಿತ: ಮಮತಾ ಬ್ಯಾನರ್ಜಿ

ಪಿಟಿಐ
Published 6 ಅಕ್ಟೋಬರ್ 2025, 16:03 IST
Last Updated 6 ಅಕ್ಟೋಬರ್ 2025, 16:03 IST
<div class="paragraphs"><p>ಮಮತಾ ಬ್ಯಾನರ್ಜಿ</p></div>

ಮಮತಾ ಬ್ಯಾನರ್ಜಿ

   

(ಪಿಟಿಐ ಚಿತ್ರ)

ಕೋಲ್ಕತ್ತ: ಉತ್ತರ ಬಂಗಾಳದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯು 'ಮಾನವ ನಿರ್ಮಿತ' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಸೋಮವಾರ) ಆರೋಪಿಸಿದ್ದಾರೆ.

ADVERTISEMENT

ಜಾರ್ಖಂಡ್ ಅನ್ನು ರಕ್ಷಿಸಲು ದಾಮೋದರ್ ವ್ಯಾಲಿ ಕಾರ್ಪೋರೇಷನ್ (ಡಿವಿಸಿ) ಅನಿಯಂತ್ರಿತವಾಗಿ ನೀರು ಬಿಡುಗಡೆ ಮಾಡಿರುವುದರಿಂದ ರಾಜ್ಯದ ದಕ್ಷಿಣ ಭಾಗಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಅವರು ಟೀಕಿಸಿದ್ದಾರೆ.

ತಲಾ ₹5 ಲಕ್ಷ ಪರಿಹಾರ...

ಈ ಸಂದರ್ಭದಲ್ಲಿ ಪ್ರವಾಹ ಹಾಗೂ ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ತಲಾ ₹5 ಲಕ್ಷ ನೀಡುವುದಾಗಿ ಮಮತಾ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಮೃತರ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವುದಾಗಿಯೂ ಘೋಷಿಸಿದ್ದಾರೆ.

ಉತ್ತರ ಬಂಗಾಳದಲ್ಲಿ ಉಂಟಾದ ಪ್ರವಾಹದಲ್ಲಿ ಮೃತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಶನಿವಾರ ರಾತ್ರಿ ಹಾಗೂ ಭಾನುವಾರ ಮುಂಜಾನೆವರೆಗೆ 12 ಗಂಟೆಗೂ ಹೆಚ್ಚು ಕಾಲ 300 ಮಿ.ಮೀ. ಮಳೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.