ಕೋಲ್ಕತ್ತಾ: ಪಶ್ಚಿಮ ಬಂಗಾಳದ ಓಂಡಾ ರೈಲು ನಿಲ್ದಾಣದ ಬಳಿ ಎರಡು ಗೂಡ್ಸ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ.
ಭಾನುವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 11 ಬೋಗಿಗಳು ಹಳಿ ತಪ್ಪಿದ್ದು ರೈಲಿನ ಇಬ್ಬರು ಲೋಕೊ ಪೈಲಟ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗೂಡ್ಸ್ ರೈಲುಗಳ ಡಿಕ್ಕಿ ಹಿನ್ನೆಲೆಯಲ್ಲಿ ಖರಗ್ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಗೂಡ್ಸ್ ರೈಲು ಮುಖ್ಯ ಹಳಿಯಲ್ಲಿ ತೆರಳದೆ ಲೂಪ್ ಲೈನ್ನಲ್ಲಿ ಹೋಗಿ ನಿಂತಿದ್ದ ಮತ್ತೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಪೊಲೀಸರು ಹೇಳಿದ್ದಾರೆ.
ಜೂನ್ 2 ರಂದು ಬಾಲಸೋರ್ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತ ಮಾಸುವ ಮುನ್ನವೇ ಮತ್ತೊಂದು ರೈಲು ಅವಘಡ ಸಂಭವಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.