ADVERTISEMENT

ಚುನಾವಣೋತ್ತರ ಹಿಂಸಾಚಾರದ ತನಿಖೆ: ಎಸ್‌ಐಟಿ ನೆರವಿಗೆ 10 ಐಪಿಎಸ್‌ ಅಧಿಕಾರಿಗಳ ನೇಮಕ

ಪಶ್ಚಿಮ ಬಂಗಾಳ ಸರ್ಕಾರದ ಕ್ರಮ

ಪಿಟಿಐ
Published 2 ಸೆಪ್ಟೆಂಬರ್ 2021, 10:37 IST
Last Updated 2 ಸೆಪ್ಟೆಂಬರ್ 2021, 10:37 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ವಿಧಾನಸಭೆ ಚುನಾವಣೆ ನಂತರ ನಡೆದ ಹಿಂಸಾಚಾರ ಕುರಿತು ತನಿಖೆಗಾಗಿ ರಚನೆಯಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನೆರವಾಗಲು ‍ಪಶ್ಚಿಮ ಬಂಗಾಳ ಸರ್ಕಾರ 10 ಜನ ಐಪಿಎಸ್‌ ಅಧಿಕಾರಿಗಳನ್ನು ನೇಮಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಚುನಾವಣೋತ್ತರ ಹಿಂಸಾಚಾರ ಕುರಿತು ತನಿಖೆ ನಡೆಸುವ ಸಂಬಂಧ ಕಲ್ಕತ್ತ ಹೈಕೋರ್ಟ್‌ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠ ಎಸ್‌ಐಟಿ ರಚಿಸುವಂತೆ ಆಗಸ್ಟ್‌ 19ರಂದು ಆದೇಶಿಸಿತ್ತು.

ಐಪಿಎಸ್‌ ಅಧಿಕಾರಿಗಳಾದ ಸೌಮೇನ್‌ ಮಿತ್ರ, ಸುಮನ್‌ ಬಾಲಾ ಸಾಹೂ ಹಾಗೂ ರಣವೀರ್‌ಕುಮಾರ್‌ ಈ ಎಸ್‌ಐಟಿಯಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.