ಲಖನೌ: ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಸಂಬಂಧ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದೆ. ಆದರೆ ರಾಜ್ಯದ ಮುಖ್ಯಮಂತ್ರಿಯಾದವರು ಮೌನವಾಗಿದ್ದಾರೆ. ಗಲಭೆಕೋರರನ್ನು ಶಾಂತಿಪ್ರಿಯರು ಕರೆಯುತ್ತಾರೆ. ರಾಜ್ಯದಲ್ಲಿ ಜಾತ್ಯತೀತತೆಯ ಹೆಸರಿನಲ್ಲಿ ಗಲಭೆ ಸೃಷ್ಟಿಸಲು ಬ್ಯಾನರ್ಜಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಮುರ್ಷಿದಾಬಾದ್ ಸೇರಿದಂತೆ ರಾಜ್ಯದ ಹಲವೆಡೆ ಹಿಂಸಾಚಾರ ಹೆಚ್ಚಾಗಿದ್ದು, ಈ ಅರಾಜಕತೆಗೆ ಪೂರ್ಣವಿರಾಮ ಹಾಕಬೇಕು. ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಮತ್ತು ಶಾಂತಿ ನೆಲಸಲು ಅನುವು ಮಾಡಿಕೊಡಬೇಕೆಂದು ಎಂದು ಆದಿತ್ಯನಾಥ್ ಒತ್ತಾಯಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.