ADVERTISEMENT

ಪಶ್ಚಿಮ ಬಂಗಾಳ: ಕತ್ವಾ-ಅಜೀಮ್‌ಗಂಜ್ ಪ್ರಯಾಣಿಕ ರೈಲಿನ ಬೋಗಿಗೆ ಬೆಂಕಿ

ಪಿಟಿಐ
Published 15 ಫೆಬ್ರುವರಿ 2026, 6:02 IST
Last Updated 15 ಫೆಬ್ರುವರಿ 2026, 6:02 IST
   

ಕೋಲ್ಕತ್ತ: ಪಶ್ಚಿಮ ಬಂಗಾಳದ ಪೂರ್ವ ವರ್ಧಮಾನ್ ಜಿಲ್ಲೆಯ ಕತ್ವಾ ರೈಲು ನಿಲ್ದಾಣದಲ್ಲಿ ಪ್ರಯಾಣಿಕ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಎರಡನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಕತ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಒಂದು ಬೋಗಿಯಲ್ಲಿ ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 30 ನಿಮಿಷಗಳ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ನಿಲ್ದಾಣದಲ್ಲಿದ್ದ ಪ್ರಯಾಣಿಕರು ಗಮನಿಸಿ ತಕ್ಷಣ ಮಾಹಿತಿ ನೀಡಿದ್ದಾರೆ. ಬೆಂಕಿ ಹರಡುವುದನ್ನು ತಡೆಯಲು ರೈಲ್ವೆ ಸಿಬ್ಬಂದಿ ತಕ್ಷಣವೇ ಬೋಗಿಯನ್ನು ಬೇರ್ಪಡಿಸಿದರು ಎಂದು ಪೂರ್ವ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

ಬೆಂಕಿಯ ಕಾರಣವನ್ನು ಪತ್ತೆಮಾಡಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.