ADVERTISEMENT

ಶಿಕ್ಷಕರ ನೇಮಕಾತಿ ಹಗರಣ: ಸಚಿವ ಪಾರ್ಥ ಚಟರ್ಜಿಯನ್ನು ವಜಾಗೊಳಿಸಿದ ಮಮತಾ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜುಲೈ 2022, 10:57 IST
Last Updated 28 ಜುಲೈ 2022, 10:57 IST
ಪಾರ್ಥ ಚಟರ್ಜಿ
ಪಾರ್ಥ ಚಟರ್ಜಿ   

ಕೋಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣದ ಆರೋಪಿ, ಪಶ್ಚಿಮ ಬಂಗಾಳದ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ಮಮತಾ ಬ್ಯಾನರ್ಜಿ ಸರ್ಕಾರವು ಸಚಿವ ಸ್ಥಾನದಿಂದ ವಜಾಗೊಳಿಸಿದೆ.

ವಜಾಗೊಳಿಸಿದ ಆದೇಶದ ಪ್ರತಿಯನ್ನು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಅಪಾರ್ಟ್‌ಮೆಂಟ್‌ನಿಂದ ಆಸ್ತಿ ಹಾಗೂ ವಿದೇಶಿ ವಿನಿಮಯದ ದಾಖಲೆ ಸಹಿತ ಸರಿ ಸುಮಾರು ₹50 ಕೋಟಿ ನಗದು ಮತ್ತು ಕೆ.ಜಿಗಟ್ಟಲೆ ಚಿನ್ನವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ADVERTISEMENT

ಪಾರ್ಥ ಚಟರ್ಜಿ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಸಿಪಿಐ(ಎಂ) ಆರೋಪಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.